ಕಾಡಾ ಅಧ್ಯಕ್ಷರಾಗಿ ಮಾಜಿ ಶಾಸಕ ಹಸನ್ ಸಾಬ್ ದೋಟಿಹಾಳ ನೇಮಕ
ಕೊಪ್ಪಳ : ಮುಂದಿನ ಎರಡು ವರ್ಷಗಳ ಅವಧಿಯವರೆಗೆ ಅಚ್ಚು ಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆ ಮುನಿರಾಬಾದ್ ಕಾಡಾ ಈ ಪ್ರಾಧಿಕಾರಕ್ಕೆ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ಪ್ರಾದಿಕಾರದ ಅಧ್ಯಕ್ಷರನ್ನಾಗಿ. ಮಾಜಿ ಶಾಸಕ ಹಸನ್ ಸಾಬ್ ದೋಟಿಹಾಳ ಇವರನ್ನು ನೇಮಿಸಲಾಗಿದೆ.
ಈ ಕುರಿತು ಜಲಸಂಪನ್ಮೂಲ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ, ಡಿ ಧನಂಜಯ್ ಅಧಿಸೂಚನೆ ಹೊರಡಿಸಿದ್ದಾರೆ.
ಕಾಡಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಸನಸಾಬ್ ದೋಟಿಹಾಳ ರಿಗೆ ಕೊಪ್ಪಳ ಜಿಲ್ಲೆಯ ಮುಸ್ಲಿಂ ಸಮುದಾಯದ ವಿವಿಧ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.
Comments are closed.