1ನೇ ತ್ರೈಮಾಸಿಕ ಕೆಡಿಪಿ ಸಭೆ ಜುಲೈ 01ಕ್ಕೆ
ಕೊಪ್ಪಳ ಕೊಪ್ಪಳ ಜಿಲ್ಲಾ ಪಂಚಾಯತಿಯಿಂದ
ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮದ 20 ಅಂಶಗಳು ಸೇರಿದಂತೆ 2023-24ನೇ ಸಾಲಿನ 1ನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜುಲೈ 01ರಂದು ಬೆಳಿಗ್ಗೆ 11ಗಂಟೆಗೆ ಜಿ.ಪಂ ಕಚೇರಿಯ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಸಭೆಯ ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಹಾಗೂ ಅನಿವಾರ್ಯ ಕಾರಣಗಳಿಂದ ಸಭೆಗೆ ಹಾಜರಾಗಲು ಸಾಧ್ಯವಾಗದಿದ್ದಲ್ಲಿ ಸಚಿವರ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.