ಕೊಪ್ಪಳ ತಾಲೂಕು ಕರಡು ಮತದಾರರ ಪಟ್ಟಿ ಪ್ರಕಟ

Get real time updates directly on you device, subscribe now.

—-
ಕೊಪ್ಪಳ  : ಮುಂಬರುವ ಜಿಲ್ಲಾ ಮತ್ತು ತಾಲೂಕಾ ಪಂಚಾಯತಿ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಕೊಪ್ಪಳ ತಾಲೂಕಿನ 8 ಜಿಲ್ಲಾ ಪಂಚಾಯತಿ ಹಾಗೂ 25 ತಾಲೂಕಾ ಪಂಚಾಯತಿ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಜೂನ್ 23ರಂದು ಜಿ.ಪಂ ಕಾರ್ಯಾಲಯದಲ್ಲಿ ಹಾಗೂ ಅಧೀನ ಕಾರ್ಯಾಲಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ.
ಕೊಪ್ಪಳ ತಾಲೂಕಿನ ಜಿಲ್ಲಾ ಹಾಗೂ ತಾಲೂಕಾ ಪಂಚಾಯತಿ ಮತಕ್ಷೇತ್ರದ ಮತದಾರರು, ಈ ಮತದಾರರ ಪಟ್ಟಿಯನ್ನು ತಮ್ಮ ಸಮೀಪದ ಮತಗಟ್ಟೆ ಅಧಿಕಾರಿಗಳ ಹತ್ತಿರ ಅಥವಾ ತಹಶೀಲ್ದಾರ ಕಚೇರಿಯ ಚುನಾವಣಾ ಶಾಖೆಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರೀಕ್ಷಿಸಿಕೊಳ್ಳಬಹುದಾಗಿದೆ. ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಜುಲೈ 04 ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಜುಲೈ 07 ಕೊನೆಯ ದಿನವಾಗಿರುತ್ತದೆ ಎಂದು ಕೊಪ್ಪಳ ತಹಶೀಲ್ದಾರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!