ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡ ರಮೇಶ ಗಬ್ಬೂರುರಿಗೆ ಕಾಲೇಜಿನಲ್ಲಿ ಸನ್ಮಾನ
ಗಂಗಾವತಿ: ಕರ್ನಾಟಕ ಸಂಗೀತ ಮತ್ತು ನೃತ್ಯ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡ ಸರ್ಕಾರಿ ಜೂನಿಯರ್ ಕಾಲೇಜ್ ಗ್ರಂಥಪಾಲಕರಾದ ರಮೇಶ ಗಬ್ಬೂರ್‌ರವರನ್ನು ಕಾಲೇಜಿನಲ್ಲಿ ಮಾರ್ಚ್-೧೮ ರಂದು ಸನ್ಮಾನಿಸಲಾಯಿತು.
ಕೊಪ್ಪಳ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸೋಮಶೇಖರ್ ಗೌಡ ಅವರು ಅಭಿನಂದನೆಗಳನ್ನು ತಿಳಿಸುತ್ತಾ, ಕರ್ನಾಟಕ ರಾಜ್ಯವು ಕಲೆ, ಸಂಗೀತ, ಸಾಹಿತ್ಯ ಮತ್ತು ಸಾಂಸ್ಕೃತಿಕವಾಗಿ ಶ್ರೀಮಂತವಾಗಿದೆ. ನಾಡಿನ ಸಂಗೀತ, ನೃತ್ಯ ಕಲಾ ಪ್ರಕಾರಗಳನ್ನು ಪೋಷಿಸಿ ಬೆಳೆಸುವ ಕ್ಷೇತ್ರದಲ್ಲಿ ಶ್ಯಾಘನೀಯ ಕಾರ್ಯವನ್ನು ಮಾಡಲಿ ಎಂದು ಹಾರೈಸಿದರು. ಯೋಗ್ಯ ವ್ಯಕ್ತಿಯನ್ನು ಗುರುತಿಸಿ ಸೂಕ್ತ ಸ್ಥಾನಮಾನ ನೀಡಿದ ಕರ್ನಾಟಕ ಸರ್ಕಾರಕ್ಕೂ, ಕನ್ನಡ ಮತ್ತು ಸಂಸ್ಕೃತಿಯ ಇಲಾಖೆಯ ಸಚಿವರಿಗೆ ಅಭಿನಂದನೆಯನ್ನು ತಿಳಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶ್ರೀ ರಮೇಶ ಗಬ್ಬೂರ್‌ರವರು ಸಂಗೀತ ಮತ್ತು ನೃತ್ಯ ಕ್ಷೇತ್ರದಲ್ಲಿ ಒಂದ? ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ, ಹಲವಾರು ಮಹತ್ತರ ಕಾರ್ಯಗಳನ್ನು ಅಕಾಡೆಮಿಯಿಂದ ನಡೆಸುವ ಮೂಲಕ ಸಂಗೀತ, ನೃತ್ಯ ಕಲಾ ಪ್ರಕಾರಗಳನ್ನು ಪ್ರೋತ್ಸಾಹಿಸುವ ಮತ್ತು ಅವುಗಳ ಸವಾಂಗಣ ಅಭಿವೃದ್ಧಿಗೆ ಸಂಪೂರ್ಣವಾಗಿ ನಾನು ಸೇವೆ ಸಲ್ಲಿಸುತ್ತೇನೆ ಎಂದು ನುಡಿದರು.
ಸದರಿ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ಶ್ರೀ ಬಸಪ್ಪ ನಾಗೋಲಿ, ಪ್ರಗತಿಪರ ಚಿಂತಕರಾದ ಡಾ. ಲಿಂಗಣ್ಣ ಜಂಗಮರಹಳ್ಳಿ, ಕುಮಾರಸ್ವಾಮಿ, ಶ್ರೀಮತಿ ರಮಾ, ಶ್ರೀಮತಿ ಶ್ರೀದೇವಿ, ಉಪನ್ಯಾಸಕಿ ಮತ್ತು ಕಾಲೇಜಿನ ಇತರೆ ಸಿಬ್ಬಂದಿಯವರು ಹಾಜರಿದ್ದರು.
Comments are closed.