ಕೆಂಪೇಗೌಡ ಜಯಂತಿ: ಪುಷ್ಪನಮನ ಸಲ್ಲಿಕೆ
—-
ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜೂನ್ 27ರಂದು ಜಿಲ್ಲಾ ಮಟ್ಟದ ಕೆಂಪೇಗೌಡ ಜಯಂತಿ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಉಪವಿಭಾಗಾಧಿಕಾರಿಗಳಾದ ಬಸವಣ್ಣಪ್ಪ ಕಲಶೆಟ್ಟಿ, ಹಿರಿಯ ಸಾಹಿತಿಗಳಾದ ಡಾ.ಮಹಾಂತೇಶ ಮಲ್ಲನಗೌಡ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ್ ಮರಬನಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಮತ್ತಿತರರು ಇದ್ದರು.
Comments are closed.