ಪರಸ್ಪರ ಸೌಹಾರ್ದತೆ ಹಾಗೂ ಎಂಸಿಸಿ ಅನ್ವಯ ಹಬ್ಬ ಆಚರಿಸಿ: ಡಿಸಿ ನಲಿನ್ ಅತುಲ್
Kannadanet 24×7 NEWS : ಹೋಳಿ ಹಬ್ಬ ಹಾಗೂ ರಂಜಾನ್ ಹಬ್ಬವನ್ನು ಎಲ್ಲ ಧಾರ್ಮಿಕ ಸಮುದಾಯದವರು ಪರಸ್ಪರ ಸೌಹಾರ್ದತೆ, ಸಹಕಾರದಿಂದ ಹಾಗೂ ಚುನಾವಣಾ ನೀತಿ ಸಂಹಿತೆ ಅನ್ವಯ ಆಚರಿಸಿ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಹೇಳಿದರು.
ಪ್ರಸಕ್ತ ಲೋಕಸಭಾ ಚುನವಾಣೆಯ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಕೇವಲ ಚುನಾವಣೆ ಸಂಬAಧಿತ ಕಾರ್ಯಕ್ರಮಗಳಲ್ಲದೆ, ಇನ್ನಿತರ ಯಾವುದೇ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಜಿಲ್ಲೆಯಲ್ಲಿ ನಡೆಯುವ ಯಾವುದೇ ಕಾರ್ಯಕ್ರಮದಲ್ಲಿ ಚುನಾವಣಾ ಸಿಬ್ಬಂದಿ ಭಾಗವಹಿಸಿ ಇಡೀ ಕಾರ್ಯಕ್ರವನ್ನು ಚಿತ್ರೀಕರಣ ಮಾಡಿಕೊಳ್ಳುತ್ತಾರೆ. ಆದ್ದರಿಂದ ಹೋಳಿ ಹಬ್ಬದ ಅಂಗವಾಗಿ ಆಯೋಜಿಸುವ ಯಾವುದೇ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಎಚ್ಚರ ವಹಿಸಬೇಕು. ಮುಂದಿನ ವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿದ್ದು, ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಬಣ್ಣ ಎರಚುವುದು, ಬಸ್ ತಡೆಯುವುದು ಮಾಡಬೇಡಿ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಕಾಮ ದಹನ ಹಾಗೂ ಹೋಳಿ ಆಚರಣೆ ದಿನ ರಸ್ತೆ ಸಂಚಾರಕ್ಕೆ, ಸಾರ್ವಜನಿಕರಿಗೆ ತೊಂದರೆ ಆಗದಂತೆ ಹಬ್ಬ ಆಚರಿಸಬೇಕು. ಪ್ರಸ್ತುತ ರಂಜಾನ್ ಮಾಸವು ಆರಂಭವಾಗಿದ್ದು, ಇತರೆ ಧರ್ಮದವರ ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ, ಅವರ ಆಚರಣೆ, ನಂಬಿಕೆಗಳಿಗೆ ಅಡಚಣೆ ಆಗದಂತೆ ಸೌಹಾರ್ದತೆ ಹಾಗೂ ಪರಸ್ಪರ ಸಹಕಾರದಿಂದ ಹೋಳಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳು ಧಾರ್ಮಿಕ ಮುಖಂಡರಿಗೆ ಸೂಚಿಸಿದರು.
ಜಿಲ್ಲೆಯಾದ್ಯಂತ ಡಿಜೆ ಬಳಕೆಯನ್ನು ನಿಷೇಧಿಸಿದೆ. ಕರ್ಕಶ ಧ್ವನಿ ವರ್ಧಕಗಳನ್ನು ಸಹ ನಿಷೇಧಿಸಿದೆ. ಡಿಜೆ ಹಾಗೂ ಕರ್ಕಶ ಧ್ವನಿವರ್ಧಕಗಳು ಶಬ್ದಮಾಲಿನ್ಯದ ಜೊತೆಗೆ ತೀವ್ರತರ ಅನಾರೋಗ್ಯದಿಂದ ಬಳಲುತ್ತಿರುವವರ ಜೀವಕ್ಕೆ ಅಪಾಯವನ್ನು ತಂದೊಡ್ಡಬಹುದು. ಆದ್ದರಿಂದ ಯಾವುದೇ ಕಾರಣಕ್ಕೂ ಹೋಳಿ ಆಚರಣೆ ಮಾತ್ರವಲ್ಲದೆ ಯಾವುದೇ ಕಾರ್ಯಕ್ರಮದಲ್ಲಿ ಡಿಜೆ ಬಳಕೆ ಮಾಡುಂವAತಿಲ್ಲ. ಹೋಳಿ ಸಂದರ್ಭ ಆಯಾ ಪ್ರದೇಶಕ್ಕೆ ಅನುಗುಣವಾಗಿ ಮದ್ಯ ಮಾರಾಟ ನಿಷೇಧಿಸಲಾಗುವುದು. ನಿಷೇಧದ ನಂತರವೂ ಮದ್ಯ ಮಾರಾಟ, ದಾಸ್ತಾನು ಕಂಡುಬAದಲ್ಲಿ ಅಂತವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಜಿಲ್ಲೆಯ ಬಹದ್ದೂರ ಬಂಡಿಯಲ್ಲಿ ಹೋಳಿ ಹಬ್ಬವನ್ನು ಪ್ರತಿ ವರ್ಷ ವಿಜೃಂಭಣೆಯಿAದ ಆಚರಿಸಲಾಗುತ್ತದೆ. ಅವರ ಆಚರಣೆಗೆ ನಮ್ಮ ವಿರೋಧವಿಲ್ಲ. ಆದರೆ ಮಾದರಿ ನೀತಿ ಸಂಹಿತೆ ಜಾರಿ ಇರುವುದರಿಂದ ಕಾರ್ಯಕ್ರಮವನ್ನು ಎಚ್ಚರಿಕೆಯಿಂದ ಆಯೋಜಿಸಬೇಕು. ಯಾವುದೇ ರೀತಿಯ ನೀತಿ ಸಂಹಿತೆ ಉಲ್ಲಂಘನೆ, ರಾಜಕೀಯ ಮುಖಂಡರು, ವಿಷಯಗಳು ಕಾರ್ಯಕ್ರಮದಲ್ಲಿ ಕಂಡುಬAದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಅಡಿ ಎಫ್‌ಐಆರ್ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಎಲ್ಲರೂ ಕಡ್ಡಾಯವಾಗಿ ನೀತಿ ಸಂಹಿತೆಯನ್ನು ಪಾಲಿಸಬೇಕು ಮತ್ತು ನೀತಿ ಸಂಹಿತೆ ಅನುಸಾರ ಪೂವಾನುಮತಿಯೊಂದಿಗೆ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಹೋಳಿ ಆಚರಣೆ ಸಂದರ್ಭ ಧಾರ್ಮಿಕ ಘರ್ಷಣೆ, ಗಲಭೆ ಅಥವಾ ಕೋಮು ಗಲಭೆಗಳಿಗೆ ಅವಕಾಶ ನೀಡದಂತೆ ಧಾರ್ಮಿಕ ಮುಖಂಡರು ಯುವಕರಿಗೆ ತಿಳಿ ಹೇಳಬೇಕು. ನೀತಿ ಸಂಹಿತೆ ಉಲ್ಲಂಘನೆಯು ಗಂಭೀರ ಪ್ರಕರಣವಾಗಿರುವುದರಿಂದ ಧಾರ್ಮಿಕ ಕಾರ್ಯಕ್ರಮದಲ್ಲಿ ಯಾವುದೇ ರಾಜಕೀಯ ಸಂಬAಧಿತ ವಿಷಯಗಳು, ಪಕ್ಷಗಳು ಚಿಹ್ನೆ, ಧ್ವಜ, ಶಾಲುಗಳನ್ನು ಧರಿಸುವಂತಿಲ್ಲ. ರಾಜಕೀಯ ವಿಷಯಗಳ ಕುರಿತು ಚರ್ಚೆಯಾಗುವಂತಿಲ್ಲ. ಆದ್ದರಿಂದ ಧಾರ್ಮಿಕ ಮುಖಂಡರು ಎಚ್ಚರಿಕೆಯಿಂದ ಹಬ್ಬ ಆಚರಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಆಯಾ ಪ್ರದೇಶಕ್ಕೆ ಅನುಗುಣವಾಗಿ ಹೋಳಿ ಹಬ್ಬವನ್ನು ಆಚರಿಸಲಾಗುತ್ತದೆ. ಕೊಪ್ಪಳದಲ್ಲಿ ಮಾರ್ಚ್ 23 ರಂದು ಕಾಮದಹನ ಹಾಗೂ ಮಾರ್ಚ್ 24 ರಂದು ಹೋಳಿ ಆಚರಿಸಿದರೆ ಗಂಗಾವತಿಯಲ್ಲಿ ಮಾ.25 ರಂದು ಕಾಮದಹನ ಹಾಗೂ ಮಾ.26 ರಂದು ಹೋಳಿ ಆಚರಿಸಲಾಗುತ್ತದೆ. ಸ್ಥಳೀಯ ಆಚರಣೆಗೆ ಅನುಸಾರವಾಗಿ ಇಲಾಖೆಯಿಂದ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗುತ್ತದೆ. ಜಿಲ್ಲೆಯ ಎಲ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸಭೆ ನಡೆಸಲಾಗುತ್ತಿದೆ. ಹೋಳಿ ಹಬ್ಬದ ಕುರಿತಂತೆ ಯಾವುದೇ ಕಾರ್ಯಕ್ರಮ ಆಯೋಜನೆಗೂ ಮುನ್ನ ಸುವಿಧಾ ಆ್ಯಪ್ ಮೂಲಕ ಎಆರ್‌ಒ ಗಳ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಅನುಮತಿ ಇಲ್ಲದೆ ನಡೆಸುವ ಯಾವುದೇ ಕಾರ್ಯಕ್ರಮದ ಆಯೋಜಿಸುವಂತಿಲ್ಲ ಎಂದು ಹೇಳಿದರು.
ಹಬ್ಬ ಆಚರಣೆ ನೆಪದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗದಂತೆ ಸಹಕರಿಸಬೇಕು. ಹೋಳಿ ಆಚರಣೆ ವೇಳೆ ನಿಷೇಧಿತ ಬಣ್ಣಗಳು, ಮೊಟ್ಟೆ ಮುಂತಾದವನ್ನು ಬಳಸಬಾರದು. ಅನುಮತಿಸಲಾದ ಹಾಗೂ ನೈಸಕರ್ಗಿಕ ಬಣ್ಣಗಳನ್ನು ಮಾತ್ರ ಬಳಸಬೇಕು. ಒತ್ತಾಯಪೂರ್ವಕವಾಗಿ ಸಾರ್ವಜನಿಕರಿಗೆ ಬಣ್ಣ ಎರಚಬಾರದು. ಹೋಳಿ ಹಬ್ಬದ ಹೆಸರಿನಲ್ಲಿ ವಾಹನ ತಡೆದು ಹಣ ವಸೂಲಿ ಮಾಡಬಾರದು. ಕಾಮದಹನದ ವೇಳೆ ವಿದ್ಯುತ್ ಅವಘಡ ಸಂಭವಿಸದAತೆ ಎಚ್ಚರ ವಹಿಸಿ. ಇತರೆ ಧರ್ಮದವರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗಬಾರದು. ಸಮಾಜಗಳ ಮುಖಂಡರು ಯುವಕರಿಗೆ ಅನಗತ್ಯ ಗಲಭೆ, ಘರ್ಷಣೆಯಾಗದಂತೆ ಶಾಂತ ರೀತಿಯಲ್ಲಿ ಹಬ್ಬ ಆಚರಿಸಲು ತಿಳಿ ಹೇಳಬೇಕು. ಜಿಲ್ಲೆಯಾದ್ಯಂತ ದೊಡ್ಡ ಪ್ರಮಾಣದಲ್ಲಿ ಕಾಮದಹನಕ್ಕೆ ಅವಕಾಶವಿಲ್ಲ. ಡಿಜೆ ಬಳಸುವಂತಿಲ್ಲ. ನಿಯಮಗಳ ಉಲ್ಲಂಘನೆ ಕಂಡು ಬಂದಲ್ಲಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಎಸ್‌ಪಿ ಅವರು ತಿಳಿಸಿದರು.
ಸಭೆಯಲ್ಲಿ ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಕೊಪ್ಪಳ ಡಿವೈಎಸ್‌ಪಿ ಮುತ್ತಣ್ಣ ಸವರಗೋಳ, ಗಂಗಾವತಿ ಡಿವೈಎಸ್‌ಪಿ ಸಿದ್ದಲಿಂಗನಗೌಡ ಪೊಲೀಸ್ ಪಾಟೀಲ್ ಸೇರಿದಂತೆ ಪಿಎಸ್‌ಐಗಳು, ವಿವಿಧ ಸಮಾಜಗಳ ಮುಖಂಡರು, ಉಪಸ್ಥಿತರಿದ್ದರು.
Comments are closed.