ಕಾಡಾ ನೂತನ ಅಧ್ಯಕ್ಷ ಹಸನಸಾಬ ದೋಟಿಹಾಳರಿಗೆ ಸನ್ಮಾನ
ಇಂದು ತುಂಗಭದ್ರಾ ಅಚ್ಚುಕಟ್ಟು ಪ್ರಾಧಿಕಾರ (ಕಾಡಾ) ನೂತನ ಅಧ್ಯಕ್ಷರಾಗಿ ನೇಮಕರಾದ ಮಾಜಿ ಶಾಸಕರಾದ ಹಸನಸಾಬ ದೋಟಿಹಾಳ ಇವರಿಗೆ ಜಿಲ್ಲಾ ಕಾಂಗ್ರೇಸ್ ಕಾರ್ಮಿಕ ವಿಭಾಗದ ಜಿಲ್ಲಾ ಅಧ್ಯಕ್ಷರಾದ ವೆಂಕಟೇಶ ಎಮ್ ಆರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪಂಡಿತ ಸನ್ಮನಿಸಿ ಗೌರವಿಸಿದರು.
ನಮ್ಮ ಭಾಗದ ರೈತರ ಬೆಳೆಗಳಿಗೆ ಸಮರ್ಪಕವಾಗಿ ನೀರು ಪೂರೈಕೆ ಮತ್ತು ಅಭಿವೃದ್ಧಿ ಕಾರ್ಯಗಳು ನಿಮ್ಮಿಂದ ನಿರೀಕ್ಷಿಸುತ್ತೇವೆ ಎಂದು ಶ್ರೀನಿವಾಸ ಪಂಡಿತ ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೃಷ್ಣರಡ್ಡಿ ಗಲಿಬಿ, ಮಾಜಿ ಜಿ.ಪಂ. ಸದಸ್ಯ ಗೂಳಪ್ಪ ಹಲಗೇರಿ, ಗಾಳೆಪ್ಪ ಪೂಜಾರ, ಪ್ರಭಾಕರ್ ಬಡಿಗೇರ, ಆನಂದ ಕಿನ್ನಾಳ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.
Comments are closed.