ಸಾಹಿತ್ಯಿಕ ಸಾಂಸ್ಕೃತಿಕ ಸಂಘಟಕ ರಾಜಶೇಖರ್ ಅಂಗಡಿ ಇನ್ನಿಲ್ಲ
ರಾಜಶೇಖರ ಗುಡದೀರಪ್ಪ ಅಂಗಡಿ(52)
ಸಾ.ಹಲಗೇರಿ,ತಾ.ಜಿ.ಕೊಪ್ಪಳ
ಜನನ -01-06-1972
ನಿಧನ-23-03-2024
ಉದ್ಯೋಗ: ಹತ್ತಿ ವ್ಯಾಪಾರಿ
ಸಂಘಟನೆಗಳಲ್ಲಿ ಸಕ್ರಿಯ:
1) ತಿರುಳ್ಗನ್ನಡ ಕ್ರಿಯಾ ಸಮಿತಿ ಸ್ಥಾಪಕರಲ್ಲಿ ಒಬ್ಬರು
2) ಕೊಪ್ಪಳ ತಾಲ್ಲೂಕು ಕಸಾಪ ಅಧ್ಯಕ್ಷರಾಗಿ ಎರಡು ಅವಧಿಗೆ ಕಾರ್ಯನಿರ್ವಹಣೆ
3) ಕೊಪ್ಪಳ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಣೆ
4) 2016 ರ ಫೆ.29 ರಂದು ಕೊಪ್ಪಳ ಜಿಲ್ಲಾ ಕಸಾಪ ಅಧ್ಯಕ್ಷರಾಗಿ ಅತ್ಯಧಿಕ ಮತಗಳ ಅಂತರದಿಂದ ಚುನಾಯಿತರಾಗಿ ಆಯ್ಕೆ
ಪ್ರಮುಖ ಕಾರ್ಯಗಳು-ಹೋರಾಟಗಳು
*ಕೊಪ್ಪಳ ಜಿಲ್ಲಾ ರಚನಾ ಹೋರಾಟದಲ್ಲಿ ಭಾಗಿ
*ಅಂಗಡಿ -ಮುಂಗಟ್ಟು,ಬ್ಯಾಂಕುಗಳ ನಾಮಫಲಕಗಳಲ್ಲಿ ಕಡ್ಡಾಯ ಕನ್ನಡ ಬಳಕೆ,ತ್ರಿಭಾಷಾ ಸೂತ್ರ ಅಳವಡಿಕೆ ಹೋರಾಟ
*ಡಾ.ಸರೋಜಿನಿ ಮಹಿಷಿ ವರದಿ ಅನುಷ್ಠಾನಗೊಳಿಸಿ ಕೊಪ್ಪಳ ಸುತ್ತಮುತ್ತಲಿನ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡಲು ಒತ್ತಾಯಿಸಿ ಹೋರಾಟ
*ಹೈದ್ರಾಬಾದ್ ಕರ್ನಾಟಕ 371 (ಜೆ) ಸಂವಿಧಾನ ತಿದ್ದುಪಡಿಗೆ ಆಗ್ರಹಿಸಿ ಹೋರಾಟ
*ಸರ್ಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಶಿಕ್ಷಣ ಪ್ರಾರಂಭಕ್ಕೆ ವಿರೋಧಿಸಿ ಅರೆಬೆತ್ತಲೆ ಹೋರಾಟ
*ಕೊಪ್ಪಳ ಜಿಲ್ಲಾ ಹಾಗೂ ತಾಲೂಕು ಸಮ್ಮೇಳನಗಳ ಯಶಸ್ವಿ ಆಯೋಜನೆ
*2011 ರಲ್ಲಿ ಗಂಗಾವತಿಯಲ್ಲಿ ಜರುಗಿದ 78 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಯಲ್ಲಿ ಪ್ರಮುಖ ಪಾತ್ರ
*ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಜಾತ್ರೆಯ ಸಾಂಸ್ಕೃತಿಕ ಕಾರ್ಯಕ್ರಮಗಳ ಯಶಸ್ವಿ ನಿರ್ವಹಣೆ
*ರಂಗಸೇತು ಸಂಘಟನೆ ಮೂಲಕ ಕೊಪ್ಪಳದಲ್ಲಿ ನೀನಾಸಂ ಹಾಗೂ ಶಿವಸಂಚಾರ ಮತ್ತಿತರ ಹೊಸ ಅಲೆಯ ನಾಟಕಗಳ ಪ್ರದರ್ಶನ ಆಯೋಜನೆ
*ಕೊಪ್ಪಳ ಸ್ವಾತಂತ್ರ್ಯ ಸಮರ ನಾಟಕದಲ್ಲಿ ಸುರಪುರದ ವೆಂಟಪ್ಪನಾಯಕ, ಬಿ.ಸಿ.ಪಾಟೀಲ ವಿರಚಿತ ಕಾಯಕಯೋಗಿ ನಾಟಕದಲ್ಲಿ ಅಕ್ಕಮಹಾದೇವಿ ಪಾತ್ರದಲ್ಲಿ ಮನೋಜ್ಞ ಅಭಿನಯ.
Comments are closed.