ಶ್ರೀರಾಮನಗರ: ಮೌಲಾನಾ ಆಜಾದ್ ಮಾದರಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗಾಗಿ ಗಂಗಾವತಿ ತಾಲೂಕಿನ ಶ್ರೀರಾಮನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 6ನೇ ತರಗತಿಯ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾ ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಶೇ.75 ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ.25 ಇತರೆ ವರ್ಗದವರಿಗೆ ಮೀಸಲಿಡಲಾಗಿದ್ದು, ಅಲ್ಪಸಂಖ್ಯಾತರ ವರ್ಗದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮಿತಿಯೊಳಗಿರಬೇಕು. ಹಿಂದುಳಿದ ವರ್ಗಗಳ 2ಎ, 3ಎ ಮತ್ತು 3ಬಿ ಅಭ್ಯರ್ಥಿಗಳ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ಮಿತಿಯೊಳಗಿರಬೇಕು. ಅಂಗವಿಕಲ ವಿದ್ಯಾರ್ಥಿಗಳಿಗೆ ಶೇ.05, ಮಾಜಿ ಸೈನಿಕರಿಗೆ ಶೇ.04 ಕಾಯ್ದಿರಿಸಲಾಗಿದೆ. ವಿಶೇಷ ದುರ್ಬಲ ವರ್ಗ ಶೇ.05, ಸಫಾಯಿ ಕರ್ಮಚಾರಿ ವಿದ್ಯಾರ್ಥಿಗಳಿಗೆ ಶೇ.05ರಷ್ಟು ಸ್ಥಾನಗಳನ್ನು ಕಾಯ್ದಿರಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ಅರ್ಜಿಯೊಂದಿಗೆ ಕಂದಾಯ ಇಲಾಖೆಯ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ವಿದ್ಯಾರ್ಥಿ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ 4 ಭಾವಚಿತ್ರಗಳೊಂದಿಗೆ ಪೋಷಕರು ಅಥವಾ ವಿದ್ಯಾರ್ಥಿಗಳು ನೇರವಾಗಿ ಎಲ್ಲಾ ದಾಖಲೆಗಳೊಂದಿಗೆ ಶ್ರೀರಾಮನಗರ ಮೌಲಾನಾ ಆಜಾದ್ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸಂಪರ್ಕಿಸಿ ಏಪ್ರಿಲ್ 16 ರೊಳಗೆ ಅರ್ಜಿ ಸಲ್ಲಿಸಬೇಕು. ಅಪೂರ್ಣವಾದ ಮತ್ತು ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಶ್ರೀರಾಮನಗರ ಮೊ.ಸಂ: 9880026927 ಅಥವಾ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ದೂ.ಸಂ: 08539-225070 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.