ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ : ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

Get real time updates directly on you device, subscribe now.

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ)ರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಚರಿಸಲಾಯಿತು.
ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಕೈವಾರ ತಾತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮರಬನಳ್ಳಿ, ವಾರ್ತಾ ಇಲಾಖೆಯ ಅಧೀಕ್ಷಕ ಎಂ.ಅವಿನಾಶ, ಸಮಾಜದ ಮುಖಂಡರಾದ ಶ್ರೀನಿವಾಸ ಕಟ್ಟಿಮನಿ, ವರಲಕ್ಷ್ಮಿ ಚಿಂತಪಲ್ಲಿ, ಗಿರೀಶ್ ಕನಕಗಿರಿ, ವೆಂಕಟೇಶ್ ಕೋಟೆ, ತಿಪ್ಪಯ್ಯನಾಯ್ಡು ಎನ್. ಸೇರಿದಂತೆ ಇನ್ನೂ ಹಲವರು ಮತ್ತು ಜಿಲ್ಲಾಧಿಕಾರಿ ಕಚೇರಿಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!