ಹಲಗೇರಿ ಗ್ರಾ.ಪಂ ಹಣವಾಳ ಗ್ರಾಮದಲ್ಲಿ ನರೇಗಾ ಕೂಲಿಕಾರರು ಕಾಯಕ ಬಂಧುಗಳಿಗೆ ಮತದಾನ ಜಾಗೃತಿಯ ಸ್ವೀಪ್ ಕಾರ್ಯಕ್ರಮ
ಹಲಗೇರಿ ಗ್ರಾಮ ಪಂಚಾಯತಿಯ ಹಣವಾಳ ಗ್ರಾಮದ ಆಂಜನೇಯ ದೇವಸ್ಥಾನದ ಆವರಣದಲ್ಲಿ ನರೇಗಾ ಕೂಲಿಕಾರರು ಕಾಯಕ ಬಂಧುಗಳಿಗೆ ಮತದಾನ ಜಾಗೃತಿಯ ಸ್ವೀಪ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಐಇಸಿ ಸಂಯೋಜಕರು ಮಾತನಾಡಿ ಮೇ-7ರಂದು ಜರುಗುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವುದರ ಮೂಲಕ ಸುಭದ್ರ ದೇಶವನ್ನಾಗಿ ನಿರ್ಮಿಸೋಣ. ಮತದಾನ ದಿನದಂದು ನಾವು ಸಮಯ ವ್ಯರ್ಥ ಮಾಡದೇ ಚುನಾವಣೆ ಆಯೋಗ ನಿಗದಿಪಡಿಸಿದ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ನಮಗೆ ಸೂಕ್ತ ಎನಿಸುವ ವ್ಯಕ್ತಿಗೆ ಮತ ಚಲಾಯಿಸಬೇಕು. ಕೂಲಿಕಾರರು ಮತದಾನ ಮಾಡಿ ಇತರರಿಗೆ ಮಾದರಿಯಾಗಬೇಕೆಂದು ಕರೆ ನೀಡಿದರು. ಮತದಾನ ಪವಿತ್ರವಾದ ಕಾರ್ಯ, ಮತದಾನದ ಮೂಲಕ ದೇಶಕ್ಕೆ ದೊಡ್ಡ ಕೊಡುಗೆ ನೀಡಿದಂತಾಗುತ್ತದೆ ಎಂದರು.
ಸ್ವೀಪ್ ಕಾರ್ಯಕ್ರಮದಲ್ಲಿ ಸೇರಿರುವ ಎಲ್ಲಾ ನರೇಗಾ ಕೂಲಿಕಾರರು ನಿಮ್ಮ ಕುಟುಂಬದ 18 ವರ್ಷ ಮೇಲ್ಪಟ್ಟ ಸದಸ್ಯರೊಂದಿಗೆ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕೈ ಜೋಡಿಸೋಣ ಎಂದರು. ನಂತರ ಮತದಾರರ ಪ್ರತಿಜ್ಞಾ ವಿಧಿಯನ್ನು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಬೋಧಿಸಿದರು.
ಸ್ವೀಪ್ ಕಾರ್ಯಕ್ರಮದಲ್ಲಿ ಗ್ರಾಮ ಕಾಯಕ ಮಿತ್ರ, ಕಾಯಕ ಬಂಧುಗಳು, ಕೂಲಿಕಾರರು, ಗ್ರಾಮಸ್ಥರು ಹಾಜರಿದ್ದರು.
Comments are closed.