ಹೆಣ್ಣು ಮಕ್ಕಳ ಕಾವ್ಯ ಪಯಣ ಸುಖವಿಲ್ಲ;ಡಾ ಮುಮ್ತಾಜ್ ಬೇಗಂ

Get real time updates directly on you device, subscribe now.

ಕೊಪ್ಪಳ,ಮಾ,30- ಹೆಣ್ಣುಮಕ್ಕಳ ಕಾವ್ಯ ಪಯಣ ಸುಖಕರವಿಲ್ಲ. ಅವರು ಬದುಕೇ ಒಂದರ್ಥದಲ್ಲಿ ಹೋರಾಟದಂತಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಹಿತ್ಯ ರಚನೆ ಅಷ್ಟು ಸುಲಭವಲ್ಲ ಎಂದು ಪ್ರಾಧ್ಯಾಪಕಿ ಡಾ.ಮುಮ್ತಾಜ್ ಬೇಗಂರವರು ನುಡಿದರು.

ಅವರು ಲಿಖಿತ್-ರೀನಾ ಪ್ರಕಾಶನ, ಕೊಪ್ಪಳ ಹಾಗೂ ಲೇಖಕಿಯರ ಸಂಘ, ಕೊಪ್ಪಳ ಜಿಲ್ಲಾ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಅನ್ನಪೂರ್ಣ ಪದ್ಮಸಾಲಿಯವರ ಗುರುತಿನ ಕೊರತೆಗಳು ಎಂಬ ಕವನ ಸಂಕಲನ ಬಿಡುಗಡೆಮಾಡಿ ಮಾತನಾಡಿದರು

ಮಹಿಳೆಯರಿಗೆ ಅನೇಕ ಬಿಕ್ಕಟ್ಟುಗಳು, ತಲ್ಲಣಗಳು ಇರುತ್ತವೆ. ಇವುಗಳ ಮಧ್ಯೆ ಒಬ್ಬ ಹೆಂಗಸು ಸಾಹಿತ್ಯ ಕ್ಷೇತ್ರದಲ್ಲಿ ತೊಡಗುವುದಕ್ಕೆ ಅನೇಕ ಸವಾಲುಗಳಿರುತ್ತವೆ, ಅವುಗಳನ್ನು ಮೆಟ್ಟಿನಿಂತು ತಮ್ಮ ಬದುಕಿನಲ್ಲಿ ಅನುಭವಿಸಿದ ನೋವು-ನಲಿವುಗಳನ್ನು ಕಾವ್ಯ, ಕಥೆ ಮತ್ಯಾವುದೋ ಮಾಧ್ಯಮದ ಮೂಲಕ ಹೊರಹಾಕಬೇಕಿದೆ ಎಂದರು.

ಕೃತಿಯ ಕುರಿತು ಮಾತನಾಡಿದ ಸೌದತ್ತಿಯ ಕವಿ ಮತ್ತು ವಿಮರ್ಶಕ ನಾಗೇಶ ಜೆ. ನಾಯಕ್‌ರವರು ಈ ಕೃತಿಯಲ್ಲಿ ಲೇಖಕಿಯ ಮದನ ಭಾವನೆಗಳು ಅಕ್ಷರಗಳ ಮೂಲಕ ಹೊರ ಹಾಕಿದ್ದಾರೆ. ಇದರಲ್ಲಿ ಹೆಣ್ಣಿನ ಶೋಷಣೆ, ಅನುಕಂಪ, ಆಕ್ರೋಶ, ಅನ್ನದಾತನ ಅಳಲು ಎಲ್ಲವೂ ಇವೆ. ಏನೇ ನೋವು-ಶೋಷಣೆಗಳಿದ್ದರೂ ಬದುಕಬೇಕೆಂಬ ಛಲ ಇದರಲ್ಲಿ ವ್ಯಕ್ತವಾಗಿದೆ ಎಂದರು. ನಿವೃತ್ತ ಪ್ರಾಧ್ಯಪಕರಾದ ಡಿ.ಎಂ.ಬಡಿಗೇರಾರವರು ಕಾರ್ಯಕ್ರಮವನ್ನು ಉದ್ಘಾಟಿಸಿದರೆ, ಪ್ರೊ.ಅಲ್ಲಮಪ್ರಭು ಬೆಟ್ಟದೂರುರವರು ಅಧ್ಯಕ್ಷತೆ ವಹಿಸಿಕೊಂಡಿದ್ದರು. ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಕೊಟ್ನೆಕಲ್‌ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯ ಮೇಲೆ ಹಿರಿಯ ಸಾಹಿತಿಗಳಾದ ಎ.ಎಂ.ಮದರಿ, ಮೊರಬದ ಕಸಾಪದ ಅಧ್ಯಕ್ಷರಾದ ಭೀಮರಾಶಿ ಹೂಗಾರ, ಹಾಗೂ ಕೃತಿಕಾರಾದ ಅನ್ನಪೂರ್ಣ ಪದ್ಮಸಾಲಿಯವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್, ಅಶೋಕ ಓಜಿನಹಳ್ಳಿ, ಶಿಲ್ಪಾ ಕೃಷ್ಣ ಚಿತ್ರಗಾರ, ಭೀಮರಾಶಿ ಹೂಗಾರ ಮತ್ತು ಮಹೇಶ ಬಳ್ಳಾರಿಯವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಅನ್ನಪೂರ್ಣ ಮನ್ನಾಪುರರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಕಾರ್ಯಕ್ರಮಕ್ಕೆ ಮಹೇಶ ಬಳ್ಳಾರಿಯವರು ಸ್ವಾಗತಿಸಿದರೆ ಕೊನೆಗೆ ರಮೇಶ ಬನ್ನಿಕೊಪ್ಪರವರು ವಂದಿಸಿದರು. ಶಿರಸಪ್ಪ ಗಡಾದರವರು ಕಾರ್ಯಕ್ರಮ ನೆರವೇರಿಸಿದರು.

Get real time updates directly on you device, subscribe now.

Comments are closed.

error: Content is protected !!