ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ:ಬೀರಪ್ಪ ಅಂಡಗಿ
ಕೊಪ್ಪಳ: ಪ್ರತಿಯೊಬ್ಬ ಮಗುವಿನ ಸರ್ವಾಂಗೀಣ ಬೆಳವಣಿಗೆಯ ಜೊತೆಯಲ್ಲಿ ಅವನಿಗೆ ಗುಣಾತ್ಮಕ ಶಿಕ್ಷಣ ಸಿಗಬೇಕಾದರೆ ಅಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದಾಗಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಹೇಳಿದರು.
ಅವರು ತಾಲೂಕಿನ ಬೆಳವಿನಾಳ ಗ್ರಾಮದಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಸಿ ನಿವೃತಿಯಾದ ವಿಜಯಾ ಹಿರೇಮಠ ಅವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ,ಒಂದು ಮಗು ಉತ್ತಮ ರೀತಿಯಲ್ಲಿ ಶಿಕ್ಷಣವನ್ನು ಪಡೆಯಬೇಕಾದರೆ ಪ್ರಾಥಮಿಕ ಹಂತದಲ್ಲಿ ನೀಡುವ ಶಿಕ್ಷಣ ಬಹಳ ಮಹತ್ವದಾದ ಹಂತವಾಗಿದೆ.ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡಿದಾಗ ಮಾತ್ರ ಆ ವಿದ್ಯಾರ್ಥಿಯು ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೇ ಮಾಡುವ ಸಾಮರ್ಥ ಇರುತ್ತದೆ.ಇಂತಹ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಶಿಕ್ಷಕರ ಪಾತ್ರ ಬಹಳ ಮಹತ್ವದಾಗಿದೆ.ಪ್ರಸ್ತುತ ದಿನಮಾನಗಳಲ್ಲಿ ಶಿಕ್ಷಕರಿಗೆ ಪಾಠ ಬೋಧನೆಗಿಂತ ಇತರೇ ಕಾರ್ಯಗಳಲ್ಲಿ ಅವರನ್ನು ಹೆಚ್ಚು ಬಳಸಸುವುದರಿಂದ ಪಾಠ ಬೋಧನೆಗೆ ಹೆಚ್ಚು ಸಮಯ ಮೀಸಲಿಡಲು ಸಾಧ್ಯವಾಗುತ್ತಿಲ್ಲ.ಇಂತಹ ಅನೇಕ ಕಾರ್ಯಗಳಿಂದ ಶಿಕ್ಷಕರಿಗೆ ಸರ್ಕಾರವು ಮುಕ್ತಿ ಕೊಡಿಸಿ ಮಗುವಿನ ಶೈಕ್ಷಣಿಕ ಪ್ರಗತಿಯ ಬಗ್ಗೆ ಹೆಚ್ಚು ತೊಡಗಿಸಿಕೊಳ್ಳವ ಹಾಗೇ ಮಾಡಬೇಕು ಎಂದು ಹೇಳಿದರು.
ಸರಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷರಾದ ಶಿವಪ್ಪ ಜೋಗಿ ಮಾತನಾಡುತ್ತಾ,ಸರ್ಕಾರಿ ನೌಕರರನಾಗಿ ಕಾರ್ಯನಿರ್ವಹಿಸುವ ಸಮಯದಲ್ಲಿ ನೇಮಕಾತಿ ಹಾಗೂ ನಿವೃತ್ತಿಯು ಸಹಜ ಕಾರ್ಯವಾಗಿದೆ.ಆದರೆ ನೇಮಕಾತಿಯಿಂದ ನಿವೃತ್ತಿಯ ಸಮಯದ ನಡುವಿನಲ್ಲಿ ಮಾಡಿದ ಉತ್ತಮ ಕಾರ್ಯಗಳು ಮಾತ್ರ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತವೆ.ಹಾಗಾಗೀ ಸರಕಾರಿ ನೌಕರರ ತಮ್ಮ ಸೇವಾ ಅವಧಿಯಲ್ಲಿ ಉತ್ತಮ ರೀತತಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಕಟಪೂರ್ವ ತಾಲೂಕ ಅಧ್ಯಕ್ಷರಾದ ಪ್ರಾಣೇಶ ಪೂಜಾರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷರಾದ ಹೊಳಿಬಸಯ್ಯಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಕರ ಸಂಘದ ತಾಲೂಕ ಅಧ್ಯಕ್ಷರಾದ ವಿರುಪಾಕ್ಷಪ್ಪ ಬಾಗೋಡಿ, ಶಿಕ್ಷಕರಾದ ದೇವರಡ್ಡಿ,ವಿಜಯಾ ಹಿರೇಮಠ,ಭಾರತಿ ಆಡೂರು,ಶರಣಯ್ಯಾ,ಸಾವಿತ್ರಿ ಮುಂತಾದವರು ಹಾಜರಿದ್ದರು.
ಕಾರ್ಯಕ್ರಮವನ್ನು ಶಿಕ್ಷಕಕರಾದ ನಾಗಪ್ಪ ನರಿ ನಿರೂಪಿಸಿದರು.
Comments are closed.