ದೇಶಕ್ಕೆ ಮೋದಿ ಜಿಲ್ಲೆಗೆ ಡಾ.ಬಸವರಾಜ ಆಯ್ಕೆಗೆ ಪ್ರತಿಯೊಬ್ಬರು ಶ್ರಮಿಸಬೇಕು; ಸಂಸದ ಸಂಗಣ್ಣ ಕರಡಿ

0

Get real time updates directly on you device, subscribe now.


ಕುಷ್ಟಗಿ. ಏ.01: ದೇಶಕ್ಕೆ ಮೋದಿ ಜಿಲ್ಲೆಗೆ ಡಾ.ಬಸವರಾಜ ಅವರ ಆಯ್ಕೆಗೆ ಪ್ರತಿಯೊಬ್ಬರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು.
ಭಾರತೀಯ ಜನತಾ ಪಾರ್ಟಿ ಕುಷ್ಟಗಿ ಮಂಡಲದ ವತಿಯಿಂದ ಸೋಮವಾರ ಮಧ್ಯಾಹ್ನ ಇಲ್ಲಿನ ಬುತ್ತಿ ಬಸವೇಶ್ವರ ಸಭಾ ಭವನದಲ್ಲಿ ಏರ್ಪಡಿಸಿದ್ದ ಬೂತ್ ವಿಜಯ ಅಭಿಯಾನ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಇಂದಿನ ಆಧುನಿಕ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಅವಶ್ಯಕತೆ ಇದೆ.
ಮಾಜಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶ ವಿದೇಶ ಮೆಚ್ಚುವಂತ ಅಭಿವೃದ್ಧಿ ಕೆಲಸ ಮಾಡಿದ್ದಾರೆ.
ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕಾದರೆ ಕೊಪ್ಪಳ ಕ್ಷೇತ್ರದ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರಿಗೆ ಹೆಚ್ಚಿನ ಮತ ನೀಡುವ ಮೂಲಕ ಆಯ್ಕೆಗೆ ಪ್ರತಿಯೊಬ್ಬ ಸದಸ್ಯರು ಶ್ರಮವಹಿಸಿಬೇಕು ಎಂದು ಸಲಹೆ ನೀಡಿದರು.
ಬಿಜೆಪಿ ಲೋಕಸಭಾ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಮಾತನಾಡಿ ಕ್ಷೇತ್ರದ ಅಭಿವೃದ್ಧಿ ಮಾಡುವ ಕನಸು ಕಟ್ಟಿಕೊಂಡು ಲೋಕಸಭಾ ಚುನಾವಣೆಯಲ್ಲಿ ಬಾಜಾಪ ಅಭ್ಯರ್ಥಿಯಾಗಿ ಕಣಕ್ಕೆ ಇಳಿದ್ದೇನೆ ನಿಮ್ಮೇಲರ ಸಹಕಾರ ಬಹುಮುಖ್ಯ ಪ್ರಸಕ್ತ ಚುನಾವಣೆಯಲ್ಲಿ ನನಗೆ ಹೆಚ್ಚಿನ ಮತ ನೀಡಿ ಬಹುಮತದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೇಶದಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಅವರ ಸಾಧನೆ ನನಗೆ ಶ್ರೀ ರಕ್ಷೆಯಾಗಲಿದೆ ಎಂದು ಹೇಳಿದರು.
ವಿಧಾನಸಭಾ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ ದೊಡ್ಡನಗೌಡ ಪಾಟೀಲ್, ಮಾಜಿ ಸಚಿವರಾದ ಹಾಲಪ್ಪ ಆಚಾರ, ಕೆ.ವಿರುಪಾಕ್ಷಪ್ಪ, ಮಾಜಿ ಶಾಸಕರಾದ ಬಸವರಾಜ ದಡೆಸೂರ, ಸಿ.ವಿ ಚಂದ್ರಶೇಖರ, ಪರಣ್ಣ ಮುನವಳ್ಳಿ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ನಾಗಪ್ಪ ಸಾಲೋಣಿ ಮಾತನಾಡಿದರು.
ಈ ಸಂದರ್ಭದಲ್ಲಿ ರವಿಕುಮಾರ ಹಿರೇಮಠ, ಪರುಶುರಾಮ ನಾಗರಾಳ,
ಜಿಲ್ಲಾ ಅಧ್ಯಕ್ಷ ನವೀನ್ ಕುಮಾರ್ ಗುಳಗಳಣ್ಣನವರ, ಕೆ.ಶಣಪ್ಪ ವಕೀಲರು, ಪ್ರಭಾಕರ ಚಿಣಿ, ಗೀರಿಗೌಡ, ಚಂದ್ರಶೇಖರ್ ಹಲಗೇರಿ, ಬಿಜೆಪಿ ತಾಲೂಕು ಅಧ್ಯಕ್ಷ ಮಹಾಂತೇಶ ಬದಾಮಿ, ಮಲ್ಲಣ್ಣ ಪಲ್ಲೇದ, ಪ್ರಭು ಶಂಕರಗೌಡ ಪಾಟೀಲ್, ಶಶಿಧರ ಕವಲಿ, ನಭಿಸಾಬ ಕುಷ್ಟಗಿ, ವೀರಣ್ಣ ಹುಬ್ಬಳ್ಳಿ, ಪಕ್ಕಿರಪ್ಪ ಚಳಗೇರಿ, ನಾಗರಾಜ ಮೇಲಿನಮನಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ದುರುಗಪ್ಪ ಹಿರೇಮನಿ ಪ್ರಾರ್ಥಿಸಿದರು.
ಬಸವರಾಜ ಹಳ್ಳೂರ ಸ್ವಾಗತಿಸಿದರು.
ಚಂದ್ರಹಾಸ ಭಾವಿಕಟ್ಟಿ ನಿರೂಪಿಸಿದರು.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: