ಹೆಚ್ಚುತ್ತಿರುವ ಬಿಸಿಲಿನ ತಾಪಮಾನ : ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿ ಬದಲು

0

Get real time updates directly on you device, subscribe now.

ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಲಬುರಗಿ, ಬಳ್ಳಾರಿ, ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳ ವೇಳಾಪಟ್ಟಿಯನ್ನು ಬೆಳಿಗ್ಗೆ 08 ಗಂಟೆಯಿAದ ಮಧ್ಯಾಹ್ನ 12 ಗಂಟೆಯವರೆಗೆ ತಾತ್ಕಾಲಿಕವಾಗಿ ಪರಿಷ್ಕರಿಸಲಾಗಿದೆ.
ಬದಲಾದ ವೇಳಾಪಟ್ಟಿಯಂತೆ ಐಸಿಡಿಎಸ್ ಸೇವೆಗಳನ್ನು ನಿಯಮಾನುಸಾರ ಯಾವುದೇ ಅಡೆತಡೆಗಳಿಲ್ಲದೆ ಅಂಗನವಾಡಿ ಫಲಾನುಭವಿಗಳಿಗೆ ತಲುಪಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಜಿ.ಸಿ.ಪ್ರಕಾಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: