ಜವಾಬ್ದಾರಿಗಳನ್ನು ಅರಿತು ಚುನಾವಣಾ ಕೆಲಸ ಮಾಡಿ: ಮಲ್ಲಿಕಾರ್ಜುನ ತೊದಲಬಾಗಿ
ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸುವಂತೆ ಕನಕಗಿರಿ ಸಹಾಯಕ ಚುನಾವಣಾ ಅಧಿಕಾರಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಹೇಳಿದರು.FST, SST, VST, VVT ತಂಡದವರು ತಮಗೆ ವಹಿಸಿದ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುವಂತೆ ತಿಳಿಸಿದರು.
ನಂತರ ಎಲ್ಲಾ ಗ್ರಾ.ಪಂ ಪಿಡಿಓರವರು ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಮೂಲಸೌಕರ್ಯವನ್ನು ಒದಗಿಸಲು ಹಾಗೂ ಚೆಕ್ ಪೋಸ್ಟ್ಗಳಲ್ಲಿ ಅಗತ್ಯ ಸೌಕರ್ಯವನ್ನು ಕಲ್ಪಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್, ಕನಕಗಿರಿ/ಕಾರಟಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಚುನಾವಣಾ ಸಿಬ್ಬಂದಿಗಳು ಹಾಜರಿದ್ದರು.
Comments are closed.