ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಅಗತ್ಯ ಕ್ರಮ ವಹಿಸಲಾಗಿದೆ : ಡಿಸಿ ನಲಿನ್ ಅತುಲ್
ಬೋರ್‌ವೆಲ್‌ಗಳ ಮೂಲಕ ನೀರು ಸರಬರಾಜು:
ಜಿಲ್ಲೆಯಲ್ಲಿ 2334 ಸರ್ಕಾರಿ ಮತ್ತು 6366 ಖಾಸಗಿ ಬೋರ್‌ವೆಲ್‌ಗಳಿದ್ದು, ಇದರಲ್ಲಿ 898 ಖಾಸಗಿ ಬೋರ್‌ವೆಲ್ ಗಳನ್ನು ಗುರುತಿಸಿದ್ದು, ಅದರಲ್ಲಿ 150 ಖಾಸಗಿ ಬೋರ್‌ವೆಲ್‌ಗಳ ಮಾಲೀಕರಿಂದ ಕರಾರು ಪತ್ರವನ್ನು ಮಾಡಿಸಿಕೊಂಡಿರುತ್ತೇವೆ. ಮುಂದಿನ 3 ತಿಂಗಳಲ್ಲಿ 151 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬರಬಹುದು ಎಂದು ಅಂದಾಜಿಸಲಾಗಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ 28 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುತ್ತದೆ. ಜಿಲ್ಲೆಯ ಕೊಪ್ಪಳ ಮತ್ತು ಕುಕನೂರು ತಾಲೂಕಿನಲ್ಲಿ 7 ಗ್ರಾಮಗಳಲ್ಲಿ ಕುಡಿಯುವ ಸಮಸ್ಯೆ ಉಂಟಾಗಿದ್ದು, ಅಲ್ಲಿ 09 ಟ್ಯಾಂಕರ್‌ನಿAದ ಪ್ರತಿ ದಿನ ಸರಾಸರಿ 3-4 ಟ್ರಿಪ್ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಮತ್ತು 33 ಗ್ರಾಮಗಳಲ್ಲಿ 38 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆಯಲಾಗಿರುತ್ತದೆ.
ಕುಡಿಯುವ ನೀರು ಸರಬರಾಜಿಗೆ ಅಗತ್ಯ ಅನುದಾನ ಮೀಸಲು:
ಗ್ರಾಮೀಣ ಮಟ್ಟದಲ್ಲಿ ಅತಿಯಾಗಿ ಕುಡಿಯುವ ನೀರಿನ ಸಮಸ್ಯೆಯಾದರೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಿಕೊಳ್ಳಲು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಿಡುಗಡೆಯಾದ ಅನುದಾನದಲ್ಲಿ ರೂ.25 ಲಕ್ಷಗಳನ್ನು ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಮೀಸಲಿರಿಸಿದೆ. 7 ತಾಲ್ಲೂಕಿನ ತಹಶೀಲ್ದಾರರ ಪಿ.ಡಿ ಖಾತೆಯಲ್ಲಿ ಸಹ ತುರ್ತು ಕುಡಿಯುವ ನೀರಿನ ಸರಬರಾಜು ಸಲುವಾಗಿ ತಲಾ ರೂ.50 ಲಕ್ಷಗಳನ್ನು ಕಾಯ್ದಿರಿಸಲಾಗಿದೆ. ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದಿಲ್ಲ ಎಂದು ಸ್ಥಳೀಯ ಸಂಸ್ಥೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಜಿಲ್ಲಾಡಳಿತದಿಂದ ಕುಡಿಯುವ ನೀರು ಸಲುವಾಗಿ ಎಲ್ಲಾ ರೀತಿಯಿಂದ ತಯಾರಿ ಮಾಡಿ ಇಟ್ಟುಕೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಪಿ.ಡಿ ಖಾತೆಯಲ್ಲಿ ರೂ.19.55 ಕೋಟಿ ಅನುದಾನ ಲಭ್ಯವಿರುತ್ತದೆ. ಮತ್ತು ಪ್ರತಿ ಸ್ಥಳೀಯ ಸಂಸ್ಥೆಗಳಲ್ಲಿ 20 ರಿಂದ 30 ಲಕ್ಷಗಳನ್ನು ಕುಡಿಯುವ ನೀರಿಗಾಗಿ ಅನುದಾನವನ್ನು ಮೀಸಲಿರಿಸಿದೆ.
ಜಿಲ್ಲೆಯಲ್ಲಿ ಅಗತ್ಯ ಪ್ರಮಾಣದ ಮೇವು ದಾಸ್ತಾನು ಲಭ್ಯ:
ಜಿಲ್ಲೆಯಲ್ಲಿ 4,80,598.5 ಮೆಟ್ರಿಕ್ ಟನ್ ಮೇವು ಲಭ್ಯವಿದ್ದು ಇನ್ನೂ 32 ವಾರಕ್ಕೆ ಸಾಕಾಗುವಷ್ಟು ಮೇವು ಲಭ್ಯವಿರುತ್ತದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಮೇವಿನ ಸಮಸ್ಯೆ ಉಂಟಾದರೆ ಮೇವಿನ ಬ್ಯಾಂಕ್ ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಮತ್ತು ಜಿಲ್ಲೆಯ ಪಶು ಸಂಗೋಪನಾ ಇಲಾಖೆಗೆ ರೈತರಿಗೆ ಮೇವಿನ ಕಿಟ್ ನೀಡಲು ಸರ್ಕಾರದಿಂದ 26659 ಮಿನಿ ಕಿಟ್‌ಗಳನ್ನು ಸರಬರಾಜು ಆಗಿದ್ದು, ಅದರಲ್ಲಿ 17609 ಕಿಟ್‌ಗಳನ್ನು ಅವಶ್ಯವಿರುವ ರೈತರಿಗೆ ನೀಡಲಾಗಿದೆ. ಜಿಲ್ಲೆಯಲ್ಲಿ ಸದ್ಯಕ್ಕೆ ಮೇವಿನ ಸಮಸ್ಯೆ ಇರುವದಿಲ್ಲ.
ರೈತರ ಹಾಗೂ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲು ಸಹಾಯವಾಣಿ ಆರಂಭ:
ಜಿಲ್ಲೆಯಲ್ಲಿ ರೈತರಿಗೆ ಇನ್‌ಪುಟ್ ಸಬ್ಸಿಡಿ ಡಿ.ಬಿ.ಟಿ ಮೂಲಕ ಜಮಾ ಆದ ಮಾಹಿತಿಯನ್ನು ಸಂಬAಧಪಟ್ಟ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಪ್ರಚುರ ಪಡಿಸಲಾಗಿದೆ. ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಮತ್ತು ಮೇವಿನ ಸಮಸ್ಯೆ ಕುರಿತು ಹಾಗೂ ರೈತರಿಗೆ ನೀಡುವ ಇನ್‌ಪುಟ್ ಸಬ್ಸಿಡಿ ಹಣ ಖಾತೆಗೆ ಜಮಾ ಆಗದೇ ಇರುವ ಬಗ್ಗೆ ದೂರುಗಳನ್ನು ಸಲ್ಲಿಸಲು ಸಾರ್ವಜನಿಕರಿಗೆ ಅನುಕೂಲವಾಗುವಂತೆ ತಾಲೂಕು ಮತ್ತು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿರುತ್ತದೆ. ಇದುವರೆಗೂ 314 ದೂರುಗಳು ಸ್ವೀಕೃತವಾಗಿದ್ದು, ಸ್ವೀಕೃತವಾದ ದೂರುಗಳಲ್ಲಿ 182 ಪೈಪ್‌ಲೈನ್ ದುರಸ್ಥಿ, 91 ಕುಡಿಯುವ ನೀರು ಒದಗಿಸಲು ಮತ್ತು 41 ಮೋಟರ್ ದುರಸ್ಥಿ ಮಾಡಿಸುವ ಕುರಿತು ದೂರುಗಳು ದಾಖಲಾಗಿವೆ. ಅದರಲ್ಲಿ 310 ದೂರುಗಳನ್ನು ಬಗೆಹರಿಸಲಾಗಿದೆ ಇನ್ನೂ 4 ದೂರುಗಳು ಬಗೆಹರಿಸಲು ಬಾಕಿ ಇದೆ.
ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಾಲ್ಲೂಕು ಕಚೇರಿಗಳಲ್ಲಿನ ಸಹಾಯವಾಣಿ ಸಂಖ್ಯೆಗಳು:
ಜಿಲ್ಲಾಧಿಕಾರಿಗಳ ಕಚೇರಿ ಮೊ.ಸಂ. 7676732001, ತಾಲ್ಲೂಕು ಕಚೇರಿ, ಕೊಪ್ಪಳ ಮೊಸಂ.9380252346, ಯಲಬುರ್ಗಾ ಮೊ.ಸಂ. 9448833207, ಕುಷ್ಟಗಿ ಮೊ.ಸಂ. 9845791349, ಕನಕಗಿರಿ ಮೊ.ಸಂ.9900433012, ಕುಕನೂರು ಮೊ.ಸಂ.8050303495, ಗಂಗಾವತಿ ಮೊ.ಸಂ.9740793877, ಕಾರಟಗಿ ಮೊ.ಸಂ.9743600343.
ಸ್ಥಳೀಯ ಸಂಸ್ಥೆಗಳ ಸಹಾಯವಾಣಿ ಸಂಖ್ಯೆಗಳು:
ಕೊಪ್ಪಳ: 08539-230192, ಭಾಗ್ಯನಗರ: 08539-230243, ಕುಕನೂರು: 8197396725, 8431363187, ಯಲಬುರ್ಗಾ: 9880524225, 9743277571, ಕುಷ್ಟಗಿ: 08536-267041, ತಾವರಗೇರಾ: 990057212, 8971014351, ಕಾರಟಗಿ: 08533-274232, ಕನಕಗಿರಿ: 8951133577, ಗಂಗಾವತಿ: 08533-230240, 8050428081.
ಕೊಪ್ಪಳ ಜಿಲ್ಲೆಯ 7 ತಾಲೂಕುಗಳನ್ನು ಸರ್ಕಾರ ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಮತ್ತು ಮೇವಿನ ಸಮಸ್ಯೆ ಉದ್ಭವಿಸಿದರೆ ತಕ್ಷಣ ಸ್ಪಂದಿಸಲು ತಹಶೀಲ್ದಾರ ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯತ್ ಇವರಿಗೆ ನಿರ್ದೇಶನ ನೀಡಲಾಗಿದೆ. ಗ್ರಾಮ ಮಟ್ಟದ ಟಾಸ್ಕ್ಫೋರ್ಸ್ನಲ್ಲಿ ಸಮಿತಿಯನ್ನು ರಚನೆ ಮಾಡಿಕೊಳ್ಳಲಾಗಿದೆ ಹಾಗೂ ಜಿಲ್ಲೆಯಲ್ಲಿ ಬರಗಾಲ ನಿರ್ವಹಣೆಗಾಗಿ ಅನುದಾನದ ಕೊರತೆ ಇರುವುದಿಲ್ಲ ಎಂದರು.
ಜಿಲ್ಲೆಯಲ್ಲಿ ಪ್ರತಿ ಮಂಗಳವಾರ ಮತ್ತು ಬುಧವಾರ ಗ್ರಾಮ ಮಟ್ಟದ ಕಾರ್ಯಪಡೆ ಮತ್ತು ಪ್ರತಿ ಗುರುವಾರ ತಾಲ್ಲೂಕಾ ಮಟ್ಟದ ಕಾರ್ಯಪಡೆ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿ ಶುಕ್ರವಾರ (ಜೂಮ್ ವಿ.ಸಿ ಮೂಲಕ) ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ಪಶು ಸಖಿ, ಕೃಷಿ ಸಖಿ ಮತ್ತು ತಾಲೂಕು ಮಟ್ಟದ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಾಪ್ತಾಹಿಕ ಸಭೆಗಳನ್ನು ನಡೆಸಲಾಗುತ್ತಿದೆ.ಜಿಲ್ಲಾಡಳಿತದಿಂದ ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಸಮಸ್ಯೆ ಆಗದಂತೆ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅಚ್ಚುಕಟ್ಟು ಬರ ನಿರ್ವಹಣೆಗೆ ಕ್ರಮ ವಹಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ ಉಪಸ್ಥಿತರಿದ್ದರು.
Comments are closed.