ಪ್ರಜಾಪ್ರಭುತ್ವ ಹಬ್ಬದಲ್ಲಿ ಖುಷಿಯಿಂದ ಪಾಳ್ಗೊಳ್ಳಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ
ಚುನಾವಣೆ ಎಂಬುದು ಪ್ರಜಾಪ್ರಭುತ್ವ ಹಬ್ಬ ಇದ್ದಂತೆ. ಎಲ್ಲರೂ ಖುಷಿಯಿಂದ ಪಾಲ್ಗೊಳ್ಳಬೇಕು ಎಂದು ಸಹಾಯಕ ಆಯುಕ್ತರು ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ- 62 ಸಹಾಯಕ ಚುನಾವಣಾ ಅಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹೇಳಿದರು.
ನಗರದ ಸರಕಾರಿ ಪದವಿ ಪೂರ್ವ (ಜೂನಿಯರ್ ) ಕಾಲೇಜು ಮೈದಾನದಲ್ಲಿ ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಸ್ವೀಪ್ ಸಮಿತಿಯಿಂದ ಲೋಕಸಭೆ ಚುನಾವಣೆ ಅಂಗವಾಗಿ ಮತದಾನ ಜಾಗೃತಿಗಾಗಿ ಮಂಗಳವಾರ ಆಯೋಜಿಸಿದ್ದ ವಾಕಥಾನ್ ಗೆ ಚಾಲನೆ ನೀಡಿ ಮಾತನಾಡಿದರು.
ಮೇ 7 ರಂದು ನಡೆಯುವ ಲೋಕಸಭೆ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಸದೃಢ ದೇಶ ಕಟ್ಟಲು ಶೇ.100 ರಷ್ಟು ಮತದಾನ ಆಗಬೇಕು. ಯಾರೊಬ್ಬರೂ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯಬಾರದು. ಯಾವುದೇ ಆಸೆ, ಆಮೀಷಕ್ಕೆ ಬಲಿಯಾಗದೇ ಮತದಾನ ಮಾಡಬೇಕು ಎಂದು ಹೇಳಿದರು.
ತಹಸೀಲ್ದಾರರಾದ ಯು.ನಾಗರಾಜ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಸ್ವೀಪ್ ಕಾರ್ಯಕ್ರಮ ಮಾಡಲಾಗುತ್ತಿದ್ದು, ಪ್ರತಿಯೊಬ್ಬರೂ ತಪ್ಪದೇ ಮತ ಚಲಾಯಿಸಬೇಕು ಎಂದರು.
ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಮಾತನಾಡಿ, ಮೇ 7 ರಂದು ನಡೆಯುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ನಿರಂತರವಾಗಿ ಸ್ವೀಪ್ ಕಾರ್ಯಕ್ರಮ ಮಾಡಲಾಗುತ್ತಿದೆ. ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದರು.
ನಗರದ ವಿವಿಧ ವೃತ್ತಗಳಲ್ಲಿ ನಡೆದ ವಾಕ್ ಥಾನದಲ್ಲಿ ಮತದಾನ ಜಾಗೃತಿ ಗೀತೆಗಳು, ಘೋಷಣೆಗಳ ಮೂಲಕ ಅರಿವು ಮೂಡಿಸಲಾಯಿತು.
ನಗರದ ಗಾಂಧಿ ಸರ್ಕಲ್ ಬಳಿ ಮತದಾನ ಮಹತ್ವ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ನಗರಸಭೆ ಪೌರಾಯುಕ್ತರಾದ ವಿರುಪಾಕ್ಷಮೂರ್ತಿ, ತಾ.ಪಂ. ಸಹಾಯಕ ನಿರ್ದೇಶಕರಾದ (ಗ್ರಾ.ಉ.) ಮಹಾಂತಗೌಡ ಪಾಟೀಲ್, ಸಿಡಿಪಿಓ ಪ್ರವೀಣ್ ಕುಮಾರ್ ಹೇರೂರು, ಸಹಾಯಕ ಕೃಷಿ ನಿರ್ದೇಶಕರಾದ ಸಂತೋಷ ಪಟ್ಟದಕಲ್ಲು, ಪಿಐ ವಾಸುಕುಮಾರ, ಪಿಎಸ್ ಐಗಳಾದ ಬಸವರಾಜ ಜಿ., ಬಸವರಾಜ ಜಿ.ಕೆ, ತಿಮ್ಮಾರೆಡ್ಡಿ, ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾದ ಶರಣೇಗೌಡ ಮಾಲಿಪಾಟೀಲ್, ಕಂದಾಯ ಇಲಾಖೆ, ತಾ.ಪಂ ಅಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ನಗರಸಭೆ, ತಾ.ಪಂ., ಗ್ರಾ.ಪಂ.
ಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ನರೇಗಾ, ಎನ್ ಆರ್ ಎಲ್ ಎಂ ಸಿಬ್ಬಂದಿಗಳು ಹಾಜರಿದ್ದರು.
Comments are closed.