ಸಂಗಾಪುರ ಗ್ರಾಮಕ್ಕೆ ಜಿ.ಪಂ. ಸಿಇಓ ಭೇಟಿ ಮಕ್ಕಳ ಆರೋಗ್ಯ ವಿಚಾರಣೆ
: ಗಂಗಾವತಿ ತಾಲೂಕಿನ ಸಂಗಾಪುರ ಗ್ರಾ.ಪಂ. ವ್ಯಾಪ್ತಿಯ ಸಂಗಾಪುರದಲ್ಲಿ ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡಿದ್ದ ಮಕ್ಕಳ ಮನೆಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಬುಧವಾರ ಖುದ್ದಾಗಿ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.
ನಂತರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ‘ಶಾಲೆಯಲ್ಲಿರುವ ಕುಡಿಯುವ ನೀರು, ಬಳಕೆ ನೀರು ಹಾಗೂ ಬಿಸಿಯೂಟ ಕೊಠಡಿ ಸೇರಿ ಇತರೆ ಸೌಲಭ್ಯಗಳ ಪರಿಶೀಲಿಸಿದರು. ಶಾಲಾ ಅನುದಾನ ಬಳಕೆ ಮಾಡಿಕೊಂಡು ಮಕ್ಕಳಿಗೆ ಸುಸಜ್ಜಿತ ಸೌಲಭ್ಯ ಕಲ್ಪಿಸಬೇಕು. ಅಡುಗೆ ಕೋಣೆಯಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ಇಂಥ ಪ್ರಕರಣಗಳು ಮತ್ತೆ ಕಂಡು ಬಂದರೆ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆಯನ್ನು ಶಾಲೆ ಮುಖ್ಯಶಿಕ್ಷಕರಿಗೆ ನೀಡಿದರು.
ಈ ವೇಳೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ, ಆರ್‌ಡಬ್ಲ್ಯುಎಸ್ ಎಇಇ ವಿಜಯ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.
Comments are closed.