ಅಕ್ಷಯ ತೃತೀಯ: ಸಾಮೂಹಿಕ ವಿವಾಹ, ವೈಯಕ್ತಿಕ ವಿವಾಹಗಳ ಮೇಲೆ ನಿಗಾ ವಹಿಸಲು ಜಿಲ್ಲಾಧಿಕಾರಿಗಳ ಸೂಚನೆ
ಅಕ್ಷಯ ತೃತೀಯ ಹಾಗೂ ಇತರೆ ದಿನಗಳಂದು ಸಾಮೂಹಿಕ ವಿವಾಹಗಳು ಹಾಗೂ ವೈಯಕ್ತಿಕ ವಿವಾಹಗಳು ಹೆಚ್ಚಾಗಿ ಆಯೋಜನೆಯಾಗುತ್ತಿದ್ದು, ಈ ಸಂದರ್ಭದಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ವಿವಾಹಗಳು ಜರುಗುವ ಸಾಧ್ಯತೆಗಳು ಅಧಿಕವಾಗಿರುವುಜದರಿಂದ ಬಾಲ್ಯ ವಿವಾಹ ನಿಷೇದಾಧಿಕಾರಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ತಿಳಿಸಿದ್ದಾರೆ.
ಮದುವೆಯ ಹೆಸರಿನಲ್ಲಿ ಮಕ್ಕಳ ಮೇಲಾಗುವ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲಾ ಹಂತಗಳಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಬಾಲ್ಯವಿವಾಹ ತಡೆಗಟ್ಟಲು ಹಾಗೂ ಅರಿವು ಕಾರ್ಯಕ್ರಮಗಳ ಮೂಲಕ ಜಾಗೃತಿಯನ್ನು ಮೂಡಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದ್ದಾಗಿಯೂ, ಇನ್ನೂ ಸಹ ಸಮುದಾಯಗಳಲ್ಲಿ ಸಾಕಷ್ಟು ಅಪ್ರಾಪ್ತ ವಯಸ್ಸಿನ ಮಕ್ಕಳ ವಿವಾಹವನ್ನು ಮಾಡುವ ಪ್ರಯತ್ನ ಮಾಡುತ್ತಿರುವುದು ಕಂಡುಬAದಿರುತ್ತದೆ.
ಮೇ 10 ರಂದು ಅಕ್ಷಯ ತೃತೀಯ ದಿನ ಇದ್ದು, ಅಂದು ಹಾಗೂ ಇತರೆ ದಿನಗಳಂದು ಸಾಮೂಹಿಕ ವಿವಾಹಗಳು ಹಾಗೂ ವೈಯಕ್ತಿಕ ವಿವಾಹಗಳು ಹೆಚ್ಚು ಆಯೋಜನೆಯಾಗುತ್ತವೆ. ಆದ್ದರಿಂದ ಜಿಲ್ಲಾ ಮತ್ತು ತಾಲೂಕು ಮಟ್ಟದ ಬಾಲ್ಯ ವಿವಾಹ ನಿಷೇದಾಧಿಕಾರಿಗಳು ನಿಮ್ಮ ವ್ಯಾಪ್ತಿಯಲ್ಲಿ ನಡೆಯುವ ಸಾಮೂಹಿಕ ಹಾಗೂ ವೈಯಕ್ತಿಕ ವಿವಾಹಗಳಲ್ಲಿ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ನಿಗಾವಹಿಸಿ ನಿಯಮಾನುಸಾರ ಸೂಕ್ತ ಕ್ರಮಕೈಗೊಂಡು, ಬಾಲ್ಯ ವಿವಾಹವಾಗದಂತೆ ಕಾರ್ಯಪ್ರವೃತ್ತರಾಗಿ, ಸಾಮೂಹಿಕ ವಿವಾಹ ಆಯೋಜಕರಿಗೆ ಹಾಗೂ ಸಾರ್ವಜನಿಕರಿಗೆ ಬಾಲ್ಯ ವಿವಾಹ ನಿಷೇದ ಕಾಯ್ದೆಯ ಕುರಿತು ಅರಿವು ಮೂಡಿಸಿ ಕೈಗೊಂಡ ಕ್ರಮದ ವರದಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಅಧೀನದಲ್ಲಿ ಬರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಸೂಚಿಸಿದ್ದಾರೆ.
Comments are closed.