ಲೋಕಸಭಾ ಚುನಾವಣೆಯಲ್ಲಿ ನರೇಗಾ ಕೂಲಿಕಾರರು ಕಡ್ಡಾಯವಾಗಿ ಮತ ಚಲಾಯಿಸಿರಿ: ಜಿ.ಪಂ ಸಿಇಒ ರಾಹುಲ್ ರತ್ನಂ ಪಾಂಡೆಯ

Get real time updates directly on you device, subscribe now.

ಮತದಾನ ಎನ್ನುವದು ಪವಿತ್ರ ಕಾರ್ಯ. ಪ್ರಜಾಪ್ರಭುತ್ವದಲ್ಲಿ ಮತ ಚಲಾವಣೆಗೆ ಅವಕಾಶ ಇರುವುದು ಸಂವಿಧಾನವು ನಮಗೆ ನೀಡಿದ ದೊಡ್ಡ ಕೊಡುಗೆಯಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಹೇಳಿದರು.
ಗುರುವಾರದಂದು ಕೊಪ್ಪಳ ತಾಲೂಕಿನ ಬಂಡಿಹರ್ಲಾಪುರ ಗ್ರಾಮ ಪಂಚಾಯತಿಯ ಬಿ ಹೊಸಳ್ಳಿ ಗ್ರಾಮದ ಕೆರೆ ಕಾಮಗಾರಿ ಸ್ಥಳದಲ್ಲ್ಲಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮತದಾರರಿಗೆ ಸ್ವೀಪ್ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮೇ-7ರಂದು ಜರುಗುವ ಚುನಾವಣೆಯಲ್ಲಿ ಕಡ್ಡಾಯವಾಗಿ ಮತಗಟ್ಟೆ ಕೇಂದ್ರಕ್ಕೆ ಹೋಗಿ ಮತ ಚಲಾಯಿಸುವದರ ಮೂಲಕ ಸುಭದ್ರ ದೇಶವನ್ನಾಗಿ ನಿರ್ಮಿಸೋಣ. ಮತದಾನ ದಿನದಂದು ನಾವು ಸಮಯ ವ್ಯರ್ಥ ಮಾಡದೇ ಚುನಾವಣೆ ಆಯೋಗ ನಿಗದಿಪಡಿಸಿದ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿ ನಮಗೆ ಸೂಕ್ತ ಎನಿಸುವ ವ್ಯಕ್ತಿಗೆ ಮತ ಚಲಾಯಿಸಬೇಕು. ಸ್ವೀಪ್ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗಿದ್ದು, ನರೇಗಾ ಕೂಲಿಕಾರರು ಮತದಾನ ಮಾಡಿ ಇತರರಿಗೆ ಮಾದರಿಯಾಗಬೇಕೆಂದು ಕರೆ ನೀಡಿದರು.
ಕಳೆದ ಬಾರಿಗಿಂತ ಈ ಬಾರಿ ವಿನೂತನವಾಗಿ ಸ್ವೀಪ್ ಕಾರ್ಯಕ್ರಮಗಳನ್ನು ಜರುಗಿಸುವ ಮೂಲಕ ಜಿಲ್ಲೆಯ ಮತದಾನ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಲು ನಾವೆಲ್ಲರೂ ಚುನಾವಣಾ ಆಯೋಗದೊಂದಿಗೆ ಕೈ ಜೋಡಿಸೋಣ. ಸ್ವೀಪ್ ಕಾರ್ಯಕ್ರಮದಲ್ಲಿ ಸೇರಿರುವ ಎಲ್ಲಾ ನರೇಗಾ ಕೂಲಿಕಾರರು ನಿಮ್ಮ ಕುಟುಂಬದ 18 ವರ್ಷ ಮೇಲ್ಪಟ್ಟ ಸದಸ್ಯರೊಂದಿಗೆ ಮತ ಚಲಾಯಿಸುವ ಮೂಲಕ ದೇಶಕ್ಕೆ ಸುಭದ್ರ ಆಡಳಿತ ಒದಗಿಸಲು ಕೈ ಜೋಡಿಸೋಣ ಎಂದು ಸಿಇಒ ಅವರು ಹೇಳಿದರು.
ತಾಲೂಕ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ ಅವರು ಮಾತನಾಡಿ, ಮತ ಚಲಾವಣೆ ತುಂಬಾ ಜವಾಬ್ದಾರಿಯುತವಾದ ಕಾರ್ಯ. ಆ ಮೂಲಕ ನಾವುಗಳು ಯಾವುದೇ ಆಸೆ, ಅಮೀಷಗಳಿಗೆ ಬಲಿಯಾಗದೇ ನಿರ್ಭಯವಾಗಿ ಮತ ಚಲಾಯಿಸಬೇಕೆಂದು ಕರೆ ನೀಡಿದರು. ನಂತರ ಮತದಾರರ ಪ್ರತಿಜ್ಞಾ ವಿಧಿಯನ್ನು ಜಿಲ್ಲಾ ಪಂಚಾಯತಿ ಸಿಇಒ ಬೋಧಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಮಹಿಳಾ ಮತದಾರರಾದ ಹಂಪಮ್ಮ ಉಪ್ಪಾರ ಇವರನ್ನು ವೇದಿಕೆಗೆ ಆಹ್ವಾನಿಸಿದ ಸಿಇಒ ಕಾರ್ಯವೈಖರಿಗೆ ನರೇಗಾ ಕೂಲಿಕಾರರು ಖುಷಿಪಟ್ಟರು.
ಸ್ವೀಪ್ ಕಾರ್ಯಕ್ರಮದಲ್ಲಿ ನರೇಗಾ ಸಹಾಯಕ ನಿರ್ದೇಶಕ ಯಂಕಪ್ಪ, ಹಿರಿಯ ಮಹಿಳಾ ಮತದಾರ ಹಂಪಮ್ಮ ಉಪ್ಪಾರ, ತಾಲೂಕ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಹನಮಂತಪ್ಪ, ತಾಲೂಕ ಯೋಜನಾಧಿಕಾರಿ ರಾಜೇಸಾಬ ನದಾಫ್, ತಾಲೂಕ ಸ್ವೀಪ್ ಸಮಿತಿ ಸದಸ್ಯರಾದ ಬಸವರಾಜ ಬಳಿಗಾರ, ತಾಲೂಕ ಐಇಸಿ ಸಂಯೋಜಕ ದೇವರಾಜ ಪತ್ತಾರ, ಪಂಚಾಯತ ಅಭಿವೃದ್ದಿ ಅಧಿಕಾರಿಗಳಾದ ರಾವ್‌ಸಾಹೇಬ ಬಿರಾದಾರ, ಗುರುದೇವಮ್ಮ, ರುದ್ರಯ್ಯ ಹಿರೇಮಠ, ತಾಂತ್ರಿಕ ಸಂಯೋಜಕ ಯಮನೂರಪ್ಪ, ತಾಂತ್ರಿಕ ಸಹಾಯಕರಾದ ರಮೇಶ್ ಕುಮಾರ, ಶಿವಪ್ರಸಾದ, ಗುರುರಾಜ, ಕಾಯಕ ಬಂಧುಗಳು, 1525 ನರೇಗಾ ಕೂಲಿಕಾರರು ಭಾಗವಹಿಸಿದ್ದರು.

Get real time updates directly on you device, subscribe now.

Comments are closed.

error: Content is protected !!