ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ:CM ಸಿದ್ದರಾಮಯ್ಯ
ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲೀಮರು ಎನ್ನುವ ತಪ್ಪು ಭಾವನೆ ಇದೆ
ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಿದ ಮುಸ್ಲಿಂ ಚಿಂತಕರ ಚಾವಡಿ
ಬೆಂಗಳೂರು,ಜೂನ್ 29: ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗವು ಇಂದು ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ಸಂಧರ್ಭದಲ್ಲಿ ಮಾತನಾಡುತ್ತಿದ್ದರು.
ಸರ್ಕಾರ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಚಾವಡಿಯು ಒಂದು ದಶಕದಿಂದ ಕರ್ನಾಟಕದ ಜನಪರ ಚಳವಳಿಗಳೊಂದಿಗೆ ಗುರುತಿಸಿಕೊಂಡಿದೆ. ಸಾಹಿತ್ಯ ಕ್ಷೇತ್ರ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ , ವಿದ್ಯಾರ್ಥಿ, ಹಾಗೂ ದಲಿತ ಚಳವಳಿಗಳು ಹಾಗೂ ಜನಪರವಾದ ಇತರೆ ಹೋರಾಟಗಳೊಂದಿಗೆ ಗುರುತಿಸಿಕೊಂಡಿದೆ. ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಚಾವಡಿ ಒತ್ತು ನೀಡಿದೆ. ತನ್ನ ಧರ್ಮದ ಕೋಮುವಾದವನ್ನು ವಿರೋಧಿಸುತ್ತಲೇ ಇನ್ನೊಂದರ ಕೋಮುವಾದವನ್ನು ವಿರೋಧಿಸುವ ಕೆಲಸ ಮಾಡುತ್ತಿದೆ ಎಂದು ಸಭೆಗೆ ತಿಳಿಸಲಾಯಿತು.
ಕಳೆದ ಐದು ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಸಮುದಾಯ ವಂಚಿತವಾಗಿದ್ದು, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ನಿಗಮಗಳಲ್ಲಿ ಅನುದಾನ ಹೆಚ್ಚಳ, ವಸತಿಶಾಲೆ, ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸುವ ಕುರಿತು ಬೇಡಿಕೆಗಳನ್ನು ಸಲ್ಲಿಸಲಾಯಿತು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಚಾವಡಿಯ ಅಧ್ಯಕ್ಷ ಮುಜಾಫರ್ ಅಸಾದಿ, ಮಸ್ತಾನ್ ಬಿರಾದರ್, ಬಾನು ಮುಷ್ತಾಖ್, ರಹಮತ್ ತರೀಕೆರೆ ಮೊದಲಾದವರು ಉಪಸ್ಥಿತರಿದ್ದರು.
programs for minorities to be resumed: Chief Minister Siddaramaiah
There is a misconception that minorities means only Muslims
Bengaluru, June 29: Chief Minister Siddaramaiah promised to resume the programs designed for minorities during their previous government.
A delegation of the Central Council of the Minority Muslim Thinkers Chavadi of Karnataka State met him today and discussed about various issues.
The Chief Minister said that five guarantees are already being implemented as announced by the government and more grants will be allotted to the minorities from next year.
Chavadi has been identified with pro-people movements in Karnataka for over a decade. It has been a part of literary field, development of Kalyan Karnataka, student and Dalit movements and other pro-people struggles. Chavadi has emphasized on the educational, social and economic development of the Muslim community. it is also against communalism, the forum explained.
For the past five years, the community has been deprived of the government schemes, and hence delegation appealed the CM to increase grants to Minority Department and Corporations,hostel, establishment of a Minority Polytechnic College in the district.
Chief Minister’s Political Secretary Naseer Ahmed, Chavadi President Muzaffar Asadi, Mastan Biradar, Banu Mustakh, Rahmat Tarikere were present.
Comments are closed.