ಕರ ಪತ್ರ, ಪಲಕ, ಪೋಸ್ಟರ್‌ಗಳ ಮುದ್ರಣದಲ್ಲಿ ಮುದ್ರಕರ ಹಾಗೂ ಪ್ರಕಾಶಕರ ಮಾಹಿತಿ ಕಡ್ಡಾಯ: ನಲಿನ್ ಅತುಲ್

Get real time updates directly on you device, subscribe now.

ಲೋಕಸಭಾ ಚುನಾವಣೆ-2024ರ ಮಾದರಿ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ, ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ, ಪಲಕಗಳು, ಪೋಸ್ಟರ್‌ಗಳಲ್ಲಿ ಮುದ್ರಕರು, ಪ್ರಕಾಶಕರು ಹಾಗೂ ಮುದ್ರಣದ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಲೋಕಸಭಾ ಚುನಾವಣೆ-2024ರ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿಯ, ಕೋಮುಸೌರ್ಹದತೆಗೆ ದಕ್ಕೆ ತರುವ ಕರಪತ್ರ, ಪಲಕಗಳು, ಪೋಸ್ಟರ್ ಮತ್ತು ಬ್ಯಾನರಗಳನ್ನು ಮುದ್ರಿಸಲು ಅವಕಾಶವಿರುವುದಿಲ್ಲ. ಈ ಹಿನ್ನಲೆಯಲ್ಲಿ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಮುದ್ರಕರು ಪಾಂಪ್ಲೇಟಗಳು ಮತ್ತು ಪೋಸ್ಟರ್ ಗಳನ್ನು ಮುದ್ರಿಸುವ ಮೊದಲು ಮುದ್ರಣಕ್ಕೆ ನೀಡುವವರ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ಪಡೆದಿರಲೇಬೇಕು. ಗುರುತಿನ ದೃಢೀಕರಣವಿಲ್ಲದೇ ಮುದ್ರಣ ಮಾಡಬಾರದು. ಯಾವುದೇ ಜಾತ್ರೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಮುದ್ರಣವಾಗುವ ಕರಪತ್ರಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರ ಹಾಕಬಾರದು ಎಂದು ಸೂಚಿಸಿದರು.
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಬ್ಯಾನರ್, ಪ್ಲೆಕ್ಸ್, ಕರಪತ್ರ ಮುದ್ರಣವಾಗದೇ ನಿಯಮವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ  127 ಎ ಪ್ರಕಾರ ಕ್ರಮ ಕೈಗೊಳ್ಳಲಾಗುವುದು.  ಆದ್ದರಿಂದ ಎಲ್ಲಾ ಪ್ರಿಂಟಿಂಗ್ ಪ್ರೆಸ್ ನವರು ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಮುದ್ರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳು ತಿಳಿಸಿದರು.
ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಮಾತನಾಡಿ, ಕರಪತ್ರ, ಫಲಕ ಪೋಸ್ಟರ್ ಬ್ಯಾನರ್ ಮುಂಭಾಗದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು, ಮೊಬೈಲ್ ಸಂಖ್ಯೆ ಮತ್ತು ಮುದ್ರಣ ಪ್ರತಿಗಳ ಸಂಖ್ಯೆ ನಮೂದಿಸಬೇಕು. ಯಾವುದೇ ಜಾತಿ, ಧರ್ಮದ ಜನರ ಭಾವನೆಗೆ ಧಕ್ಕೆ ತರುವ ವಿಷಯವನ್ನು ಮುದ್ರಿಸಬಾರದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಚುನಾವಣಾ ವಿಭಾಗದ ರವಿಕುಮಾರ ವಸ್ತ್ರದ್, ಜಿಲ್ಲಾ ವಾರ್ತಾಧಿಕಾರಿ ಕೆ.ಎನ್.ರಮೇಶ ಸೇರಿದಂತೆ ಜಿಲ್ಲೆಯ ವಿವಿಧ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: