ಡಾ ಬಾಬು ಜಗಜೀವನರಾಂ ಜನ್ಮದಿನಾಚರಣೆ: ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಕೆ
: ಹಸಿರು ಕ್ರಾಂತಿಯ ಹರಿಕಾರರಾದ ಡಾ ಬಾಬು ಜಗಜೀವನರಾಂ ರವರ 117ನೇ ಜನ್ಮದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಚರಿಸಲಾಯಿತು.
ಲೋಕಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಬಾಬು ಜಗಜೀವನರಾಂ ರವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ತಿಪ್ಪಣ್ಣ ಸರಸಗಿ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
Comments are closed.