ಯುವ ಮತದಾರರ ಆಕರ್ಷಣೆಗಾಗಿ ತಾಲೂಕ ಸ್ವೀಪ್ ಸಮಿತಿಯಿಂದ ಕ್ರಿಕೆಟ್ ಪಂದ್ಯಾವಳಿ

Get real time updates directly on you device, subscribe now.

ಕುಷ್ಟಗಿ ಕ್ಷೇತ್ರದಲ್ಲಿ ಯುವ ಮತದಾರರು ಹಾಗೂ ವಿಶೇಷ ಚೇತನರು ನೋಂದಣಿಯಾಗಿದ್ದು ಅವರಿಂದ ಕಡ್ಡಾಯ ಮತದಾನದ ಉದ್ದೇಶ : ಮತಕೇಂದ್ರಕ್ಕೆ ಹೋಗಲು ವಿಶೇಷ ಚೇತನಿಗೆ ವಾಹನದ ವ್ಯವಸ್ತೆ ಸಕ್ಷಮ ಆಪ್ ಸಹಾಯ – ರಾಹುಲ್ ರತ್ನಂ ಪಾಂಡೆಯ

: ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಲೋಕಸಭಾ ಚುನಾವಣೆ-2024 ಯಲ್ಲಿ ಯುವ ಮತದಾರರು ಹಾಗೂ ವಿಶೇಷ ಚೇತನರ ಮತದಾನದ ಪ್ರಮಾಣ ಹೆಚ್ಚಿಸಲು ಈ ಬಾರಿ ವಿಶೇಷವಾಗಿ ಕುಷ್ಟಗಿ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಮಾನ್ಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಾಹುಲ್ ರತ್ನಂ ಪಾಂಡೆಯ ರವರು ತಿಳಿಸಿದರು

ಯುವ ಮತದಾರರ ಭಾಗವಹಿಸುವಿಕೆ ಪ್ರಮಾಣ ಹೆಚ್ಚಿಸಲು ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಿರಂತರವಾಗಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರಿಂದ ಶೇಕಡಾವಾರು ಹೆಚ್ಚಿನ ಮತದಾನವಾಗಿತ್ತು. ಅದರಂತೆ ಈ ಭಾರಿಯೂ ಜಿಲ್ಲಾ ಸ್ವೀಪ್ ಸಮಿತಿ ಮನೆ ಭೇಟಿ, ಮ್ಯಾರಾಥಾನ್, ಪಂಜಿನ ಮೆರವಣಿಗೆ, ಆರೋಗ್ಯ ಶಿಬಿರ, ಮೇಣದ ಬತ್ತಿ ಹಚ್ಚುವುದು ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಭಾರಿ ವಿಶೇಷವಾಗಿ ಯುವ ಮತದಾರರು ವಿಶೇಷ ಚೇತನರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ ಎಂದರು

ಈ ಕಾರ್ಯಕ್ರಮದಲ್ಲಿ ತಾಲೂಕ ಸಹಾಯಕ ಚುನಾವಣಾಧಿಕಾರಿಗಳಾದ ರೇಷ್ಮಾ ಹಾನಗಲ್, ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರಾದ ನಿಂಗಪ್ಪ ಎಸ್ ಮಸಳಿ, ತಹಶಿಲ್ದಾರರಾದ ರವಿ , ತಾ ಪಂ ಸಹಾಯಕ ನಿರ್ದೇಶಕರಾದ ನಿಂಗನಗೌಡ ವಿ ಹೆಚ್ ಹಾಗೂ ತಾಲೂಕು ಮಟ್ಟದ‌ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು, ಪ್ಲೈಯಿಂಗ್ ಸ್ವ್ಕಾಡ್, ಬಿಎಲ್ಒರವರು, ಎಲ್ಲ ಗ್ರಾಮ ಪಂಚಾಯತಿ ಪಿಡಿಒರವರು, ಗ್ರಾ.ಪಂ ಸಿಬ್ಬಂದಿ, ಯುವ ಮತದಾರರು ಸಾರ್ವಜನಿಕರು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: