ಜೆಡಿಎಸ್- ಬಿಜೆಪಿ ತೊರೆದು ಕೈ ಹಿಡಿದ ಚೆನ್ನಪ್ಪ ಕೋಟ್ಯಾಳ & ಮುಖಂಡರು
ನಗರಸಭೆ 15ನೇ ವಾರ್ಡಿನ ಜೆಡಿಎಸ್ ಸದಸ್ಯ ಚೆನ್ನಪ್ಪ ಕೋಟ್ಯಾಳ ಕಾಂಗ್ರೆಸ್ ನ ತತ್ವ ಸಿದ್ದಾಂತ ಹಾಗೂ ಜನಪರ ಕಾರ್ಯಕ್ರಮ ಮೆಚ್ಚಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ನೇತೃತ್ವದಲ್ಲಿ ಶನಿವಾರ ತಮ್ಮ ಸ್ವ ನಿವಾಸದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು.
ಬಳಿಕ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ, ದೇಶದಲ್ಲಿ ಅಭಿವೃದ್ಧಿಗಿಂತ ಜಾತಿ- ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ ನಡೆಯುತ್ತಿದೆ. ದೇಶದ ಜನತೆಗೆ ನೀಡಿದ ಯಾವ ಆಶ್ವಾಸನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಈಡೇರಿಸಿದೇ ಜನರಿಗೆ ವಂಚನೆ ಮಾಡಿದೆ. ಹೀಗಾಗಿ ದೇಶಾದ್ಯಂತ ಈಬಾರಿ ಜನತೆ ಬದಲಾವಣೆ ಬಯಸಿದ್ದಾರೆ. ಹೀಗಾಗಿ ಅನೇಕ ನಾಯಕರು, ಮುಖಂಡರು ವಿವಿಧ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಳ್ಳುತ್ತಿದ್ದಾರೆ ಎಂದರು.
ನಗರಸಭೆ ಸದಸ್ಯ ಚೆನ್ನಪ್ಪ ಕೋಟ್ಯಾಳ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರಿಂದ ಪಕ್ಷಕ್ಕೆ ಮತ್ತಷ್ಟು ಶಕ್ತಿ ಬಂದಾಂತಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಪಕ್ಷ ಸಂಘಟಿಸಿ, ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸೋಣ ಎಂದು ಕರೆ ನೀಡಿದರು.
ಜೆಡಿಎಸ್ ತೊರೆದು ಕೈ ಸೇರ್ಪಡೆ ನಂತರ ಮಾತನಾಡಿದ ಚೆನ್ನಪ್ಪ ಕೋಟ್ಯಾಳ, ಕಳೆದ ಹಲವು ವರ್ಷಗಳಿಂದ ಜೆಡಿಎಸ್ ಪಕ್ಷಕ್ಕಾಗಿ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಜೆಡಿಎಸ್ ನಾಯಕರ ಜತೆ ಹಳ್ಳಿ- ಹಳ್ಳಿಗೂ ಹೋಗಿ ಪಕ್ಷ ಸಂಘಟಿಸುವ ಕೆಲಸ ಮಾಡಿದ್ದೇ. ಆದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ನಮ್ಮನ್ನು ಕಡೆಗಣಿಸಲಾಯಿತು. ಹೀಗಾಗಿ ಜೆಡಿಎಸ್ ತೊರೆದು ನಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ ಎಂದರು.
ಬಿಜೆಪಿ ಮುಖಂಡ, ನಗರಸಭೆ ಮಾಜಿ ಸದಸ್ಯ ಶಿವಣ್ಣ ಕೊಡಂಗಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ನೇತೃತ್ವದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ವೈಜನಾಥ ದಿವಟರ್, ವೀರಣ್ಣ ಗಾಣಿಗೇರ್, ರಾಜಶೇಖರ ಆಡೂರು, ಶಿವಕುಮಾರ್ ಪಾವಲಿಶೆಟ್ಟರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Comments are closed.