ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳ ರಕ್ಷಣೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ
ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ
ಬೆಂಗಳೂರು, : ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಯ ನೀಡಿದರು.
ಗೃಹಕಚೇರಿ ಕೃಷ್ಣಾದಲ್ಲಿ ಗಳ ನಾಯಕರು ಇಂದು ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಮತಾಂತರ ನಿಷೇಧ ಕಾಯ್ದೆಗೆ ತರಲಾಗಿದ್ದ ಸಂವಿಧಾನ ವಿರೋಧಿ ತಿದ್ದುಪಡಿಯನ್ನು ರದ್ದುಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಮತಾಂತರ ನಿಷೇಧ ಕಾಯ್ದೆಯಡಿ ಪಾದ್ರಿಗಳ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ಹಾಗೂ ಮುಂದಿನ ಆಯವ್ಯಯದಲ್ಲಿ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಹಾಗೂ ಕ್ರೈಸ್ತರ 14 ಪಂಗಡಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
Comments are closed.