ಜನತಂತ್ರ ಉತ್ಸವದಲ್ಲಿ ಎಲ್ಲರೂ ಭಾಗವಹಿಸಿ, ಹಕ್ಕು ಚಲಾಯಿಸಿ: ನಲಿನ್ ಅತುಲ್
ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯತ್, ಕೊಪ್ಪಳ ನಗರಸಭೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶುಕ್ರವಾರ ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ “ನಮ್ಮ ರಾಷ್ಟ್ರವನ್ನು ಮುನ್ನಡೆಸಲು ಒಂದಾಗೋಣ ಮತ ಚಲಾಯಿಸೋಣ ಪ್ರಜಾಪ್ರಭುತ್ವದ ಗೆಲುವಿಗಾಗಿ ವಾಕ್‌ಥಾನ್, ನಾನು ಖಚಿತ ಮತದಾನ ಮಾಡುವೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬವಿದ್ದಂತೆ. ಪ್ರತಿಯೊಬ್ಬರು ವಿವೇಚನೆಯಿಂದ ಮತಚಲಾಯಿಸಬೇಕು. ಮತದಾನ ಪ್ರಕ್ರಿಯೆಯಿಂದ ಯಾರು ಸಹ ದೂರ ಉಳಿಯಬಾರದು. ಯಾರೇ ಇರಲಿ ಎಲ್ಲರ ಮತಕ್ಕೂ ಒಂದೇ ಮೌಲ್ಯ ಇರುತ್ತದೆ. ಜಿಲ್ಲೆಯ ಮತದಾನ ಪ್ರಮಾಣ ಹೆಚ್ಚಳಕ್ಕೆ ಎಲ್ಲರೂ ಶ್ರಮಿಸಬೇಕು. ನೊ ಯುವರ್ ಕ್ಯಾಂಡಿಯೆಟ್ಸ್ ಆಪ್ (KYC) ಮೂಲಕ ಚುನಾವಣೆಯಲ್ಲಿರುವ ಅಭ್ಯರ್ಥಿಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದು ಎಂದು ಹೇಳಿದರು.
ಪ್ರತಿಜ್ಞಾ ವಿಧಿ ಸ್ವೀಕಾರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಆಗಿರುವ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಾಹುಲ್ ರತ್ನಂ ಪಾಂಡೆಯ ಅವರು ಮತದಾನ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ನೆರೆದಿದ್ದ ಎಲ್ಲರೂ ಪ್ರತಿಜ್ಞಾ ವಿಧಿ ಸ್ವೀಕಾರಿಸಿದರು.
ಮತದಾನ ಅರಿವು ಮೂಡಿಸಲು ಸಿದ್ಧ: ಸ್ವೀಪ್ ಐಕಾನ್ಸ್:
ಯಾವುದೇ ಅರ್ಹ ಮತದಾರರ ಮತದಾನದಿಂದ ಹೊರಗುಳಿಯಬಾರದು. ಈ ಹಿನ್ನೆಲೆ ಜಿಲ್ಲೆಯಲ್ಲಿ ಮತದಾನ ಅರಿವು ಮೂಡಿಸಲು ಶ್ರಮಿಸುವುದಾಗಿ ಜಿಲ್ಲಾ ಸ್ವೀಪ್ ಐಕಾನ್ಸ್ ಡಾ ಶಿವಕುಮಾರ್ ಮಾಲಿಪಾಟೀಲ್, ಪೂರ್ಣಿಮಾ, ರಮ್ಯಾ ಹಾಗೂ ಮಹೆಬೂಬ್ ಕಿಲ್ಲೆದಾರ್ ಅವರು ತಿಳಿಸಿದರು.
ಸಹಿ ಸಂಗ್ರಹ: ನಾವು ಖಚಿತ ಮತದಾನ ಮಾಡುತ್ತೇವೆ ಎಂಬ ಸಹಿ ಸಂಗ್ರಹ ಬೋರ್ಡ್ ನಲ್ಲಿ ಡಿಸಿ, ಸಿಇಓ, ಎಸ್.ಪಿ ಸೇರಿದಂತೆ ಎಲ್ಲಾ ಅಧಿಕಾರಿಗಳು ಸಹಿ ಮಾಡಿ, ಈ ಅಭಿಯಾನಕ್ಕೆ ಕೈಜೋಡಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್., ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗಲಾ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ ಮತ್ತು ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಕಾಲೇಜು ಉಪನ್ಯಾಸಕರು, ಜಿಲ್ಲೆಯ ಚಿತ್ರಕಲಾ, ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.
ಕಾಲ್ನಡಿಗೆ ಜಾಥವು ತಾಲ್ಲೂಕು ಕ್ರೀಡಾಂಗಣದಿಂದ ಪ್ರಾರಂಭಗೊಂಡ, ಸಾಲಾರ್ ಜಂಗ್ ರಸ್ತೆ, ಗಡಿಯಾರ ಕಂಬ, ಜವಾಹರ್ ರಸ್ತೆ, ಅಶೋಕ್ ಸರ್ಕಲ್ ವರೆಗೆ ನಡೆಯಿತು.
Comments are closed.