ಬರ ಪರಿಹಾರ ವಿಳಂಬಕ್ಕೆ ಕೇಂದ್ರವೇ ಹೊಣೆ- – ಶಾಸಕ ಕೆ. ರಾಘವೇಂದ್ರ ಹಿಟ್ನಾಳ

Get real time updates directly on you device, subscribe now.

Kannadanet NEWS 24×7

– ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಮಲತಾಯಿ ಧೋರಣೆ  – ಬಿಜೆಪಿ‌ ವಿರುದ್ಧ ಕೈ ಶಾಸಕ‌ ವಾಗ್ದಾಳಿ – ಬಿಜೆಪಿ-ಜೆಡಿಎಸ್ ತೊರೆದು ಕೈ ಸೇರ್ಪಡೆ

ಕೊಪ್ಪಳ  ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಕೂಡಲೇ ರೈತರ ಸಮಸ್ಯೆಗಳಿಗೆ ಸ್ಪಂದಿಸುವುದು ಸರ್ಕಾರಗಳ ಕರ್ತವ್ಯ. ಆದರೆ, ಕೇಂದ್ರ ಸರ್ಕಾರ ರೈತರ ವಿಷಯದಲ್ಲಿ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ. ರಾಜ್ಯದ ಪಾಲನ್ನು ಕೇಳುವ ಹಕ್ಕು ಎಲ್ಲರಿಗೂ ಇದೆ. ಇನ್ನಾದರೂ ಕೇಂದ್ರ ಮಲತಾಯಿ ಧೋರಣೆ ನೀತಿ ಕೈಬಿಟ್ಟು ರಾಜ್ಯಕ್ಕೆ ಬರ ಪರಿಹಾದ ಬಿಡುಗಡೆಗೊಳಿಸಲಿ ಎಂದು ಶಾಸಕ‌ ಕೆ. ರಾಘವೇಂದ್ರ ಹಿಟ್ನಾಳ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ತಾಲೂಕಿನ ಅಗಳಕೇರಾ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದ 223 ತಾಲ್ಲೂಕುಗಳಲ್ಲಿ ಬರದ ಛಾಯೆ ಆವರಿಸಿದೆ.ಹಲವು ತಾಲ್ಲೂಕುಗಳಲ್ಲಿ ಬರದ ಸ್ಥಿತಿ ತೀವ್ರವಾಗಿದೆ. ಲಕ್ಷಾಂತರ ಎಕರೆಯಷ್ಟು ಬೆಳೆ ನಷ್ಟವಾಗಿದೆ. ಹಲವೆಡೆ ಜನರು ಗುಳೆ ಹೋಗುವ ಸ್ಥಿತಿಯೂ ಎದುರಾಗಿದೆ. ರಾಜ್ಯದಲ್ಲಿ ಬರದ ಕಾರಣದಿಂದ ಆಗಿರುವ ನಷ್ಟದ ಸ್ವಲ್ಪ ಪ್ರಮಾಣವನ್ನು ಕೇಂದ್ರ ಸರ್ಕಾರವು ತುಂಬಿಸಿಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ಅಮಿತ್ ಶಾ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಖುದ್ದು ಭೇಟಿ ಮಾಡಿ ಮನವಿ ಸಲ್ಲಿಸಿತು. ಕೇಂದ್ರ ತಂಡವೂ ರಾಜ್ಯಕ್ಕೆ ಭೇಟಿ ನೀಡಿ, ಅಧ್ಯಯನ ನಡೆಸಿದೆ. ಆದರೆ ಕೇಂದ್ರ ಸರ್ಕಾರದಿಂದ ಈವರೆಗೂ ನಯಾಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ. ಅಭಿವೃದ್ಧಿ ಮತ್ತು ‌ಅನ್ನದಾತರ ವಿಚಾರದಲ್ಲಿ ‌ಕೇಂದ್ರ ತೋರಿದ ಧೋರಣೆ ಸರಿಯಲ್ಲ. ಕೂಡಲೇ ಬರ ಪರಿಹಾರ ಬಿಡುಗಡೆಗೊಳಿಸಿ ರಾಜ್ಯದ ರೈತರ ಬೆನ್ನಿಗೆ ನಿಲ್ಲುವ ಕೆಲಸ ಮಾಡಲಿ ಎಂದು ತಾಕೀತು‌ ಮಾಡಿದರು.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ದಿವಾಳಿಯಾಗಲಿದೆ ಎನ್ನುವ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಫಿ ಮಾಡಿ, ಮೋದಿ ಗ್ಯಾರಂಟಿ ಮಾಡಿದ್ದಾರೆ. ಗ್ಯಾರಂಟಿ ಯೋಜನೆಯಿಂದ ದೇಶದ ಆರ್ಥಿಕ ಸ್ಥಿತಿ ದಿವಾಳಿಯಾವುದಿಲ್ಲವೇ ಎಂದು ಪ್ರಶ್ನಿಸಿದ ಅವರು, ದೇಶದ ಬಡಜನರ ಆರ್ಥಿಕ ಪರಿಸ್ಥಿತಿ ಸುಧಾರಣೆ ತರುವ ಕೆಲಸ ನಮ್ಮ ಪಕ್ಷ ಮಾಡುತ್ತಿದೆ. ಹೀಗಾಗಿ ಕೇಂದ್ರದಲ್ಲಿ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡುವ ಮೂಲಕ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸುವಂತ ಕೆಲಸ ಮಾಡುತ್ತಿದ್ದೇವೆ. ಗ್ಯಾರಂಟಿಗಳ ಬಗ್ಗೆ ಅಪಹಾಸ್ಯ ಮತ್ತು ಸುಳ್ಳು ಹೇಳುತ್ತಿರುವ ಬಿಜೆಪಿಯವರಿಗೆ ಮತದಾರರೇ ಉತ್ತರ ನೀಡಲಿದ್ದಾರೆ ಎಂದರು.

ಕೊಪ್ಪಳ ಕ್ಷೇತ್ರದಲ್ಲಿ ಕಳೆದ ಮೂವತ್ತು ವರ್ಷಗಳಿಂದ ಹಿಟ್ನಾಳ ಮತ್ತು ‌ಕರಡಿ ಕುಟುಂಬ ರಾಜಕಾರಣ ಮಾಡಿಕೊಂಡು ಬಂದಿದೆ. ನಾವು ಇಷ್ಟು ವರ್ಷ ಕುಟುಂಬ ಮತ್ತು ವೈಯಕ್ತಿಕ ಟೀಕೆ ಮಾಡುವ ರಾಜಕಾರಣ ಮಾಡಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಕುಟುಂಬ ಹತ್ತಿಕ್ಕಬೇಕು ಎಂಬ ಉದ್ದೇಶದಿಂದ ಮತ್ತೊಬ್ಬರು ಪ್ರಯತ್ನಪಟ್ಟರು. ಅದು‌ ಫಲಿಸಲಿಲ್ಲ. ಸಂಗಣ್ಣ ಕರಡಿ ಮುತ್ಸದಿ ರಾಜಕಾರಣಿ ಅವರನ್ನು ಕಡೆಗಣಿಸಿರುವುದು ಅವರ ಪಕ್ಷಕ್ಕೆ ನಷ್ಟ. ಮೂರನೇ ವ್ಯಕ್ತಿಯಿಂದ ಇಂದು ನೀವೆಲ್ಲರೂ ನಮ್ಮೊಂದಿಗೆ ಸೇರಿರುವುದೇ ಅದೃಷ್ಟ ಎಂದು ಬಿಜೆಪಿ ಮತ್ತು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಮುಖಂಡರಿಗೆ ಹೇಳಿದರು.

ಕಾಂಗ್ರೆಸ್ ಪಕ್ಷದ ನಿಯೋಜಿತ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಅನೇಕ ಬಡಕುಟುಂಬಗಳು ಜೀವನ ಸಾಗಿಸುತ್ತೀವೆ. ಸಾಮಾಜಿಕ ಜಾಲತಾಣದಲ್ಲಿ ಅಜ್ಜಿಯೊಬ್ಬರು ಗ್ಯಾರಂಟಿ ಯೋಜನೆ ಬಗ್ಗೆ ಮಾತನಾಡಿದ ವಿಡಿಯೋ ವೈರಲ್ ಆಗಿದೆ. ಇಂತ ಅನೇಕ ಕುಟುಂಬಗಳು ಸರ್ಕಾರದ ಯೋಜನೆಗಳನ್ನೆ ನೆಚ್ಚಿಕೊಂಡಿವೆ. ಇನ್ನಾದರೂ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಟೀಕೆ ಮಾಡೋದನ್ನು ಕೈಬಿಡಿ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಮತ್ತು ಜನಪರ ಕಾರ್ಯಕ್ರಮ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದರು.

Get real time updates directly on you device, subscribe now.

Comments are closed.

error: Content is protected !!