ಅಬಕಾರಿ ಇಲಾಖೆಯಿಂದ ಒಟ್ಟು 50 ಲಕ್ಷ ಮೌಲ್ಯದ ವಸ್ತುಗಳ ಜಪ್ತಿ

Get real time updates directly on you device, subscribe now.

ಕೊಪ್ಪಳ : ಲೋಕಸಭಾ ಚುನಾವಣೆ-2024 ರ ಸಂಬಂಧ ನೀತಿ ಸಂಹಿತೆ ಜಾರಿಯಾದ ಮಾರ್ಚ್ 16 ರಿಂದ ಏಪ್ರಿಲ್ 09 ರವರೆಗೆ ಜಿಲ್ಲಾ ಅಬಕಾರಿ ಇಲಾಖೆಯಿಂದ ಒಟ್ಟು ರೂ. 50,61,464 ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಉಪ ಆಯುಕ್ತರಾದ ಬಿ.ಆರ್.ಹಿರೇಮಠ್ ಅವರು ತಿಳಿಸಿದ್ದಾರೆ.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾರ್ಚ್ 16 ರಿಂದ ಏ.09 ರವರೆಗೆ ಜಿಲ್ಲಾ ಅಬಕಾರಿ ಇಲಾಖೆಯಿಂದ ಒಟ್ಟು 196 ದಾಳಿಗಳನ್ನು ನಡೆಸಲಾಗಿದ್ದು, 147 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 127 ಜನರನ್ನು ಬಂಧಿಸಲಾಗಿದೆ. ಪ್ರಕರಣಗಳಲ್ಲಿ 4286.190 ಲೀ. ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ 1 ಲಾರಿ, 1 ಒಮಿನಿ ವ್ಯಾನ್ ಹಾಗೂ 23 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು 25 ವಾಹನಗಳನ್ನು ಜಪ್ತಿ ಮಾಡಲಾಗಿದ್ದು, ಜಪ್ತು ಮಾಡಲಾದ ಮದ್ಯ ಹಾಗೂ ವಾಹನಗಳ ಒಟ್ಟು ಮೌಲ್ಯ ರೂ. 50,61,464 ಆಗಿದ್ದು, ಚುನಾವಣಾ ಅಕ್ರಮ ತಡೆಯುವ ಹಿನ್ನೆಲೆಯಲ್ಲಿ ಇಲಾಖೆಯ ಅಧಿಕಾರಿ, ಸಿಬ್ಬಂದಿ ನಿರಂತರ ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಅಬಕಾರಿ ಉಪ ಆಯುಕ್ತರು  ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ

Get real time updates directly on you device, subscribe now.

Comments are closed.

error: Content is protected !!