ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ವಿಶ್ವ ಆರೋಗ್ಯ ದಿನಾಚರಣೆ: ಶಿವಾನಂದ ವ್ಹಿ.ಪಿ

Get real time updates directly on you device, subscribe now.

ಎಲ್ಲಾ ರಾಷ್ಟç ಮತ್ತು ರಾಜ್ಯಗಳಲ್ಲಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದು ವಿಶ್ವ ಆರೋಗ್ಯ ದಿನಾಚರಣೆಯ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ಸ್ಪೀಪ್ ಸಮಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ, ನಗರದ ಹೊಸಪೇಟೆ ರಸ್ತೆಯ ಪಕ್ಕದಲ್ಲಿರುವ ಅಭಯ ಸಾಲ್ವೆಂಟ್ ರೈಸ್ ಮಿಲ್‌ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ  ಏ.08 ರಂದು ಆಯೋಜಿಸಿದ್ದ ವಿಶ್ವ ಆರೋಗ್ಯ ದಿನಾಚರಣೆ ಹಾಗೂ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಪ್ರತಿ ವರ್ಷ ಏಪ್ರಿಲ್-7 ರಂದು ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗುತ್ತದೆ. ಈ ವರ್ಷ “ನನ್ನ ಆರೋಗ್ಯ, ನನ್ನ ಹಕ್ಕು” ಎಂಬ ಘೋಷವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. 1948 ರಿಂದ ಇವತ್ತಿನವರೆಗೂ ಏಪ್ರಿಲ್-07 ರಂದು ಈ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇದರ ಉದ್ದೇಶ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಇಲಾಖೆ ಯೋಜನೆಗಳನ್ನು ಪಡೆದುಕೊಂಡು ದೇಶವನ್ನು ರೋಗಮುಕ್ತಗೊಳಿಸಿ, ಸುಂದರವಾದ ಅಥವಾ ಆರೋಗ್ಯಕರವಾದ ವಾತಾವರಣವನ್ನು ನಿರ್ಮಿಸುವುದಾಗಿದೆ. ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ ಎಂಬ ಮಂತ್ರದೊAದಿಗೆ ತಾವು ತಮ್ಮ ತಮ್ಮ ಗ್ರಾಮಗಳಲ್ಲಿ ಆರೋಗ್ಯಕರ ಮಾಹಿತಿ ಕುರಿತು ಅರಿವು ಮೂಡಿಸಬೇಕು ಎಂದು ಕಾರ್ಮಿಕರಿಗೆ ತಿಳಿಸಿದರು.
ಆರೋಗ್ಯಕರ ಜೀವನಕ್ಕಾಗಿ ಪೌಷ್ಠಿಕ ಆಹಾರ ಸೇವನೆ, ನಿಯಮಿತ ವಾಯ್ಯಾಮ ಮಾಡುವುದು, ಮಾನಸಿಕ ಒತ್ತಡಗಳ ನಿರ್ವಹಣೆ, ದಶ್ಚಟಗಳಿಂದ ದೂರವಿರುವುದು, ನಿಯಮಿತ ಆರೋಗ್ಯ ತಪಾಸಣೆ ಮಾಡಿಸುವುದು, ವೈಯಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡುವುದು ಮುಂತಾದ ಸರಳ ಸೂತ್ರಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ತಿಳಿಸಿದರು.
ಮತದಾನದ ಬಗ್ಗೆ ಜಾಗೃತಿ:
ಮುಂಬರುವ 18ನೇ ಲೋಕಸಭಾ ಚುನಾವಣೆಗಳು ಕರ್ನಾಟಕದಲ್ಲಿ 02 ಹಂತದಲ್ಲಿ ನಡೆಯಲಿದ್ದು, ನಮ್ಮ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಮೇ 07 ರಂದು  ಮತದಾನ ನಡೆಯಲಿದೆ. ಅಂದು ಕಡ್ಡಾಯವಾಗಿ ಎಲ್ಲರೂ ಮತದಾನ ಮಾಡಿ, ಸುಭದ್ರ ಸರ್ಕಾರ ರಚಿಸಲು ಸಹಕರಿಸಬೇಕು. ಭಾರತ ಪ್ರಜಾಪ್ರಭುತ್ವ ದೇಶವಾಗಿದೆ. ಪ್ರಜೆಗಳಿಂದ ಪ್ರಜೆಗಳಿಗೋಸ್ಕರ ಪ್ರಜೆಗಳೇ ನಡೆಸುವ ಸರ್ಕಾರ ನಮ್ಮದಾಗಿದೆ. ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಘೋಷವಾಕ್ಯದೊಂದಿಗೆ ಮೇ-07 ರಂದು ನಡೆಯುವ ಚುನಾವಣೆ ದಿನದಂದು ಯಾವುದೇ ಮತದಾರ ಮತದಾನದಿಂದ ಹೊರಗುಳಿಯದಂತೆ, ಎಲ್ಲರೂ ಕಡ್ಡಾಯವಾಗಿ ಮತಗಟ್ಟೆಗೆ ಬಂದು, ಮತದಾನ ಮಾಡಬೇಕು. ಸದೃಢ ಪ್ರಜಾಪ್ರಭುತ್ವಕ್ಕಾಗಿ ಮತದಾರರ ಸಾಕ್ಷರತೆ ಎಂಬ ಅಂಶವನ್ನು ಆಧಾರವಾಗಿ ಇಟ್ಟುಕೊಂಡು ಮತದಾನ ಮಾಡುವಂತೆ ಕಾರ್ಮಿಕರಿಗೆ ತಿಳಿಸಿದರು. ನಂತರ ಮತದಾನ ಕುರಿತು ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳಾದ ಉದಯಕುಮಾರ, ಲಿಂಕ್‌ವರ್ಕರ್ ಯಲ್ಲಪ್ಪ, ಡಿ.ಇ.ಓ ಹಾಗೂ ಇತರೆ ಸಿಬ್ಬಂದಿಗಳು ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಿದರು.

Get real time updates directly on you device, subscribe now.

Comments are closed.

error: Content is protected !!