ಮುಸ್ಲಿಂ ಬಾಂಧವರಿಗೆ ಕ್ಯಾವಟರ್ ಶುಭಾಶಯ

Get real time updates directly on you device, subscribe now.

ಕೊಪ್ಪಳ: ರಂಜಾನ್ ಪ್ರಯುಕ್ತ ನಗರದ ಈದ್ಗಾ ಮೈದಾನಕ್ಕೆ ಗುರುವಾರ ಭೇಟಿ ನೀಡಿದ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರು ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಬ್ ಕಾ ಸಾಥ್, ಸಬ್ ಕಾ ವಿಕಾಸವು ಬಿಜೆಪಿಯ ನಿಲುವಾಗಿದೆ. ಎಲ್ಲ ಜಾತಿ, ಜನಾಂಗ, ಧರ್ಮದವರ ಅಭಿವೃದ್ಧಿ ಆಗಬೇಕು ಎಂಬುದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಶಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಜನಾಂಗದವರ ಜೀವನ ಮಟ್ಟ ಸುಧಾರಿಸಲು ಕೇಂದ್ರ ಬಿಜೆಪಿ ಸರ್ಕಾರ ಹಲವಾರು ಜನಪ್ರಿಯ ಯೋಜನೆ ಜಾರಿ ತಂದಿದ್ದಾರೆ ಎಂದು ತಿಳಿಸಿದರು.
ಈ ವೇಳೆ ಬಿಜೆಪಿಯ ಚಂದ್ರಶೇಖರ್ ಪಾಟೀಲ್ ಹಲಗೇರಿ, ಸುನೀಲ್ ಹೆಸರೂರು ಸೇರಿ ಬಿಜೆಪಿ ಮುಖಂಡರು ಸೇರಿ ಮತ್ತಿತರರಿದ್ದರು.

Get real time updates directly on you device, subscribe now.

Comments are closed.

error: Content is protected !!