ಮೊದಲ ದಿನ 4 ಅಭ್ಯರ್ಥಿಗಳಿಂದ 7 ನಾಮಪತ್ರಗಳ ಸಲ್ಲಿಕೆ

Get real time updates directly on you device, subscribe now.

ಲೋಕಸಭಾ ಚುನಾವಣೆ

Election breaking news  ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರು ನಾಮ ಪತ್ರ ಸಲ್ಲಿಕೆಯ ಮೊದಲ ದಿನವಾದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಭ್ಯರ್ಥಿಗಳಿಂದ ಚುನಾವಣಾ ನಾಮಪತ್ರಗಳನ್ನು ಸ್ವೀಕರಿಸಿದರು.

8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಕೆ ಏಪ್ರಿಲ್ 12 ರಂದು ಆರಂಭವಾಗಿದ್ದು, ಶುಕ್ರವಾರದಂದು ಭಾರತಿಯ ಜನತಾ ಪಾರ್ಟಿಯ ಅಭ್ಯರ್ಥಿಯಾಗಿ ಬಸವರಾಜ್ ಕ್ಯಾವಟರ್ 2 ನಾಮಪತ್ರಗಳನ್ನು, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಅಭ್ಯರ್ಥಿಯಾಗಿ ಶರಣಪ್ಪ ಅವರು 2 ನಾಮಪತ್ರಗಳನ್ನು ಹಾಗೂ ಭಾರತಿಯ ರಾಷ್ಟ್ರೀಯ ಕಾಂಗ್ರೆಸ್ (ಐ) ಪಕ್ಷದ ಅಭ್ಯರ್ಥಿಯಾಗಿ ರಾಜಶೇಖರ ಕುಯ್ಯಪ್ಪನರ ಅವರು 02 ನಾಮಪತ್ರ ಸಲ್ಲಿಸಿದರು ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಮಹಿಬುಬಸಾಬ ಅವರು 01 ನಾಮಪತ್ರ ಸಲ್ಲಿಸಿದ್ದು, ಒಟ್ಟು 4 ಅಭ್ಯರ್ಥಿಗಳಿಂದ 7 ಚುನಾವಣಾ ನಾಮಪತ್ರಗಳು ಮೊದಲ ದಿನ ಸಲ್ಲಿಕೆಯಾಗಿವೆ.

Get real time updates directly on you device, subscribe now.

Comments are closed.

error: Content is protected !!
%d bloggers like this: