ಅಸಂಖ್ಯಾತ ಕಾರ್ಯಕರ್ತರ ಕಾರ್ಯದಿಂದ ಮತ್ತೊಮ್ಮೆ ಬಿಜೆಪಿ ಅರಳಲಿದೆ- ಕ್ಯಾವಟರ್
ಸಿರುಗುಪ್ಪ: ಕಾರ್ಯಕರ್ತರೇ ನಮ್ಮ ಪಕ್ಷದ ಶಕ್ತಿ. ಸಧೃಡ ರಾಷ್ಟ್ರ ನಿರ್ಮಾಣಕ್ಕಾಗಿ ಅರ್ಪಿಸಿಕೊಂಡಿರುವ ಅಸಂಖ್ಯಾತ ಕಾರ್ಯಕರ್ತರ ಕಾರ್ಯದಿಂದ ಈ ಬಾರಿ ದೇಶದಲ್ಲಿ ಮತ್ತೊಮ್ಮೆ ಬಿಜೆಪಿ ಅರಳಲಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ವಿಶ್ವಾಸ ವ್ಯಕ್ತಪಡಿಸಿದರು.
ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಾಲಯದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರೇ ಬಿಜೆಪಿಯ ಜೀವಾಳ. ಪ್ರತಿ ಮನೆ ಮನೆಗೆ ತೆರಳಿ ಪಕ್ಷದ ಯೋಜನೆ ಹಾಗೂ ಸಾಧನೆ ತಿಳಿಸಬೇಕು. ಈ ಬಾರಿ ದೇಶಾದ್ಯಂತ 400ಕ್ಕೂ ಅಧಿಕ ಸ್ಥಾನ ಗಳಿಸಿ ಮೋದಿಜೀ ಮೂರನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ ಎಂದರು.
ರಾಜ್ಯಾದ್ಯಂತ ಬಿಜೆಪಿಯ ಪ್ರತಿ ತಾಲೂಕುಗಳಲ್ಲಿ ಎಲ್ಲ ಮೋರ್ಚಾಗಳ ಪದಾಧಿಕಾರಿಗಳು ಹೊಸದಾಗಿ ನೇಮಕರಾಗಿದ್ದಾರೆ. ಪದಾಧಿಕಾರಿಗಳು ತಮ್ಮ ಜವಾಬ್ದಾರಿ ಯನ್ನು ಸಮರ್ಪಕವಾಗಿ ನಿರ್ವಹಿಸಿ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದ ಶಿವರಾಮೇಗೌಡ, ಮಾಜಿ ಶಾಸಕ ಎಸ್.ಎ.ಸೋಮಲಿಂಗಪ್ಪ, ಬಿಜೆಪಿ ಮಂಡಲದ ಅಧ್ಯಕ್ಷ ಎಚ್.ಎಸ್.ಮಲ್ಲಿಕಾರ್ಜುನ ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
Comments are closed.