ಸಿರುಗುಪ್ಪ ಬಿಜೆಪಿ ಮಹಾಶಕ್ತಿ ಕೇಂದ್ರದ ಬಹಿರಂಗ ಚುನಾವಣಾ ಸಭೆ

Get real time updates directly on you device, subscribe now.

ಸಿರುಗುಪ್ಪ: ಹತ್ತು ವರ್ಷಗಳಿಂದ ಭಾರತ ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವದಲ್ಲಿ ಜಾಗತಿಕ ಸಮುದಾಯದ ಮಧ್ಯೆ ಎದೆಯುಬ್ಬಿಸಿ ಮುನ್ನುಗ್ಗುತ್ತಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಹೇಳಿದರು.
ವಿಧಾನಸಭಾ ಕ್ಷೇತ್ರದ ಹಂಚೋಳ್ಳಿ ಮಹಾಶಕ್ತಿ ಕೇಂದ್ರದ ಬಹಿರಂಗ ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು, ಹತ್ತನೇ ಸ್ಥಾನದಲ್ಲಿದ್ದ ಭಾರತದ ಆರ್ಥಿಕತೆ ಈಗ ಮೂರನೇ ಸ್ಥಾನಕ್ಕೇರಿದೆ ಎಂದರು.
ರಷ್ಯಾ – ಉಕ್ರೇನ್ ಯುದ್ಧದ ಸಂದರ್ಭದಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದ ಭಾರತದವರು ಸಿಲುಕಿದ್ದು, ಯುದ್ಧವನ್ನು ತಾತ್ಕಾಲಿಕವಾಗಿ ನಿಲ್ಲಿಸಿ ಭಾರತೀಯರನ್ನು ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ಕರೆ ತಂದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಾತಿಗೆ ವಿಶ್ವದಾದ್ಯಂತ ಪಾಶಸ್ತ್ಯ ಹಾಗೂ ಗೌರವ ಸಿಗುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ ಎಂದು ತಿಳಿಸಿದರು.
ಮಾಜಿ ಸಂಸದ ಶಿವರಾಮೇಗೌಡ ಮಾತನಾಡಿ, 2009ರಲ್ಲಿ ಮೊದಲ ಬಾರಿಗೆ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದೆನು. ಸತತವಾಗಿ ಬಿಜೆಪಿ ಮೂರು ಬಾರಿ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈ ಬಾರಿಯೂ ಬಿಜೆಪಿ ಗೆಲ್ಲಬೇಕು. ವೈದ್ಯಕೀಯ ವೃತ್ತಿಯಲ್ಲಿ ಸೇವೆ ಸಲ್ಲಿಸಿದ ಡಾ.ಬಸವರಾಜ ಕ್ಯಾವಟರ್ ಅವರಿಗೆ ಮತ ನೀಡಿ ಗೆಲ್ಲಿಸಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ಹೆಚ್.ಎಂ.ಮಲ್ಲಿಕಾರ್ಜುನ, ಮಾಜಿ ಶಾಸಕ ಸೋಮಲಿಂಗಪ್ಪ, ಅರುಣಾ ರೆಡ್ಡಿ, ದರಪ್ಪ ನಾಯಕ್, ಮುಖಂಡರು , ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಇದ್ದರು.

ಕ್ಯಾವಟರ್‌‌ಗೆ ಮುಖಂಡರ ಸಾಥ್:  ಸಿರುಗುಪ್ಪದಲ್ಲಿ ನಡೆದ ಮಹಾಶಕ್ತಿ ಕೇಂದ್ರದ ಬಹಿರಂಗ ಚುನಾವಣಾ ಸಭೆಯಲ್ಲಿ ಮಾಜಿ ಸಂಸದ ಶಿವರಾಮೇಗೌಡ, ಶಾಸಕ ಜನಾರ್ದನ ರೆಡ್ಡಿ ಪತ್ನಿ ಅರುಣಾ ರೆಡ್ಡಿ, ಮಾಜಿ ಶಾಸಕ ಸೋಮಲಿಂಗಪ್ಪ, ಕೆಆರ್‌ಪಿಪಿ ಮುಖಂಡ ದರಪ್ಪ ನಾಯಕ ಅವರು ಚುನಾವಣೆ ಪ್ರಚಾರದಲ್ಲಿ ಸಾಥ್ ನೀಡಿದರು

Get real time updates directly on you device, subscribe now.

Comments are closed.

error: Content is protected !!