ಯುವ ಮತದಾರರ ಜಾಗೃತಿಗಾಗಿ ಪತ್ರಕರ್ತರೊಂದಿಗೆ ಕ್ರಿಕೆಟ್ ಆಡಿದ ಡಿಸಿ, ಸಿಇಓ !

Get real time updates directly on you device, subscribe now.

ಕನ್ನಡನೆಟ್

ಹೆಚ್ಚಿನ ಮತದಾನಕ್ಕಾಗಿ ವಿನೂತನ ಕಾರ್ಯಕ್ರಮ ಆಯೋಜಿಸುತ್ತಿರುವ ಜಿಲ್ಲಾ ಸ್ವೀಪ್ ಸಮಿತಿ

ಕೊಪ್ಪಳ : ಲೋಕಸಭಾ ಚುನಾವಣೆಯಲ್ಲಿ ಯುವ ಮತದಾರರಲ್ಲಿ ಮತದಾನ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಓ ಅವರು ಪತ್ರಕರ್ತರೊಂದಿಗೆ ಕ್ರಿಕೆಟ್ ಪಂದ್ಯಗಳನ್ನು ಆಡಿ ಎಲ್ಲರ ಗಮನಸೆಳೆದರು.

ಪ್ರಸ್ತುತ ಯುವ ಸಮುದಾಯ ಕ್ರಿಕೆಟ್ ಪ್ರೇಮಿಗಳಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಯುವ ಮತದಾರರನ್ನು ಸೆಳೆಯಲು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ & ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೇಯ ಅವರು ಬ್ಯಾಟಿಂಗ್, ಬೌಲಿಂಗ್ , ಫೀಲ್ಡಿಂಗ್ ಮೂಲಕ ಎಲ್ಲರ ಗಮನ ಸೆಳೆದರು. ಜೊತೆಗೆ ಅಧಿಕಾರಿಗಳೊಂದಿಗೆ ದಿನಪತ್ರಿಕೆ, ಟಿವಿ ಮಾಧ್ಯಮದ ಪತ್ರಕರ್ತರು ಬ್ಯಾಟಿಂಗ್, ಬೌಲಿಂಗ್ ಮಾಡಿದರು.

ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಜಿಲ್ಲೆಯ ಯುವ ಮತದಾರರು, ಹಿರಿಯ ನಾಗರಿಕರು, ವಿಶೇಷಚೇತನರು, ಮಹಿಳೆಯರು, ರೈತಾಪಿ ವರ್ಗದವರು, ಕ್ರೀಡಾಭಿಮಾನಿಗಳಿಂದ ಮತದಾನದ ಪ್ರಮಾಣ ಹೆಚ್ಚಿಸಲು ಈ ಬಾರಿ ವಿಶೇಷವಾಗಿ 64-ಕೊಪ್ಪಳ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ & ಕೊಪ್ಪಳ ಮೀಡಿಯಾ ಕ್ಲಬ್ & ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ-ಜಿಲ್ಲಾ-ತಾಲೂಕ ಸ್ವೀಪ್ ಸಮಿತಿಯ ಸಂಯುಕ್ತಾಶ್ರಯಗಳಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆದವು.

ಇದಕ್ಕೂ ಮುನ್ನ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಾಹುಲ್ ರತ್ನಂ ಪಾಂಡೆಯ ಅವರು ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡವಂತೆ ನೈತಿಕ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿದರು.

ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ರಾಹುಲ್ ರತ್ನಂ ಪಾಂಡೆಯ ಅವರು ಉದ್ಘಾಟಿಸಿ ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಿರಂತರವಾಗಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರಿಂದ ಹೆಚ್ಚಿನ ಮತದಾನ ಆಗಿತ್ತು. ಅದರಂತೆ ಈ ಬಾರಿಯೂ ಹೆಚ್ಚಿನ ಮತದಾನವಾಗಲು ಜಿಲ್ಲಾ ಸ್ವೀಪ್ ಸಮಿತಿಯಿಂದ ಮನೆ ಭೇಟಿ, ವಾಕಥಾನ್, ಬೈಕ್ ರಾಲಿ, ಎತ್ತಿನ ಬಂಡಿ ಅಭಿಯಾನ, ಮ್ಯಾರಾಥಾನ್, ಪಂಜಿನ ಮೆರವಣಿಗೆ, ವಿಶೇಷ ಚೇತನರ ಬೈಕ್ ರ್ಯಾಲಿ,ಆರೋಗ್ಯ ಶಿಬಿರ, ಮಹಿಳೆಯರಿಂದ ಮಾನವ ಸರಪಳಿ, ಕ್ಯಾಂಡಲ್ ಲೈಟ್ ಅಭಿಯಾನ ಮುಖಾಂತರ ವಿಶೇಷ-ವಿನೂತನ ಕಾರ್ಯಕ್ರಮಗಳನ್ನು ಮಾಡಿ ಹೆಚ್ಚಿನ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ನವವಧು ಪ್ರಭುರಾಜ್ ರವರು ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮತದಾನ ಜಾಗೃತಿಯ ಮೂಡಿಸಿದ್ದು ಮಾನ್ಯರಿಗೆ ನಮ್ಮ ಮದುವೆಗೆ ಬಂದು ಶುಭಕೋರಿ ಮಾನ್ಯರಿಗೆ ಮದುವೆಯಲ್ಲಿ ಮತದಾನ ಜಾಗೃತಿ ಮೂಡಿಸಲು ಮದುವೆ ಆಮಂತ್ರಣ ನೀಡಿದ್ದು ವಿಶೇಷವಾಗಿತ್ತು.

ಈ ಕಾರ್ಯಕ್ರಮದಲ್ಲಿ ಚುನಾವಣಾ ವೀಕ್ಷಕರಾದ ಚಂದ್ರಶೇಖರ್ ತೆಮ್ಮಬಾವೇಕರ್, ಜಿಲ್ಲಾ ಚುನಾವಣಾ ರಾಯಭಾರಿಗಳಾದ ಡಾ. ಶಿವಕುಮಾರ್ ಮಾಲಿ ಪಾಟೀಲ್ & ಮೈಬೂಬು ಕಿಲ್ಲೆದಾರ, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿಗಳಾದ ಅಮೀನ್ ಅತ್ತಾರ್, ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರಾದ ದುಂಡಪ್ಪ ತುರಾದಿ & ಸಂತೋಷ ಪಾಟೀಲ್ ಬಿರಾದಾರ್, ನಿಂಗಪ್ಪ ಮುಸಳಿ EO ರವರು, ಪತ್ರಕರ್ತರು, ಯುವ ಮತದಾರರು, ಕ್ರೀಡಾಭಿಮಾನಿಗಳು ಹಾಜರಿದ್ದರು.
ಮಾನ್ಯ ಜಿಲ್ಲಾಧಿಕಾರಿಗಳು & ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಬ್ಯಾಟಿಂಗ್-ಬಾಲಿಂಗ್ ಮಾಡುವ ಮೂಲಕ ಖುಷಿಯ ಕ್ಷಣಗಳನ್ನು ಅನುಭವಿಸಿದರು.
ಜಿಲ್ಲಾ IEC ಸಂಯೋಜಕರು ಕೊಪ್ಪಳ

Get real time updates directly on you device, subscribe now.

Comments are closed.

error: Content is protected !!
%d bloggers like this: