ಡಾ.ಬಿ. ಆರ್. ಅಂಬೇಡ್ಕರ್ ಭಾರತದ ಹೆಮ್ಮೆಯ ಪುತ್ರ: – ಮರಿಸ್ವಾಮಿ ಕುಂಟೋಜಿ
ಗಂಗಾವತಿ: ಏಪ್ರಿಲ್-೧೪ ಅಂಬೇಡ್ಕರ್ ಜಯಂತಿ ಅಂಗವಾಗಿ ನಗರದ ಕೋರ್ಟ್ ಮುಂಭಾಗದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ವಿವಿಧ ದಲಿತಪರ ಸಂಘಟನೆಗಳಿಂದ ಪು?ನಮನ ಸಲ್ಲಿಸಿ, ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸುವ ಮೂಲಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ದಲಿತಪರ ಸಂಘಟನೆಯ ಮುಖಂಡರಾದ ಕುಂಟೋಜಿ ಮರಿಯಪ್ಪ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಭಾರತದ ಹೆಮ್ಮೆಯ ಪುತ್ರ. ನಮ್ಮ ರಾಷ್ಟ್ರ ಕಂಡ ಶ್ರೇ? ನಾಯಕರಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೂಡಾ ಪ್ರಮುಖರು. ಅಂಬೇಡ್ಕರ್ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ. ಅವರು ಸಾಮಾಜಿಕವಾಗಿ ಮೂಡಿಸಿದ ಸಂಚಲನಗಳು ಅ? ಹಿರಿದಾಗಿದ್ದವು. ಇವರ ತತ್ವ ಆದರ್ಶಗಳು ಸುಂದರ ಸಮಾಜವನ್ನು ನಿರ್ಮಿಸುವಂತಿದೆ. ಅದೂ ಅಲ್ಲದೆ, ಪ್ರತಿಯೊಬ್ಬ ಭಾರತೀಯರ ಪಾಲಿನ ಪವಿತ್ರ ಗ್ರಂಥವಾದ ಸಂವಿಧಾನದ ಹಿಂದಿನ ದೊಡ್ಡ ಶಕ್ತಿ ಬಾಬಾಸಾಹೇಬ್ ಅಂಬೇಡ್ಕರ್ ಎಂದು ಬಣ್ಣಿಸಿದ್ದಾರೆ. ಅಂಬೇಡ್ಕರ್ ಅವರ ಸಾಧನೆ, ದೇಶಕ್ಕೆ ಕೊಟ್ಟ ಕೊಡುಗೆಯನ್ನು ಸ್ಮರಿಸಲು ಏಪ್ರಿಲ್-೧೪ ರಂದು ಪ್ರತಿವ? ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಗುತ್ತದೆ. ಅದೇ ರೀತಿ ಇಂದು ವಿವಿಧ ದಲಿತಪರ ಸಂಘಟನೆಗಳಿಂದ ಕೋರ್ಟ್ ಮುಂಭಾಗದಲ್ಲಿರುವ ಎಂದು ತಿಳಿಸಿದರು.
ನಂತರ ನಗರಸಭೆ ಪ್ರಯುಕ್ತ ಆರ್ ವಿರೂಪಾಕ್ಷಪ್ಪ ಮೂರ್ತಿ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರ ಬೋಧನೆಗಳು, ಆದರ್ಶಗಳು ಸದಾ ನಮ್ಮ ಬದುಕಿಗೆ ದಾರಿ ತೋರಲಿ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ ಬದುಕೋಣ ಎಂದು ಹೇಳಿದರು. ಈ ವಿಶೇ? ದಿನದಂದು ಡಾ. ಬಿ.ಆರ್ ಅಂಬೇಡ್ಕರ್ ಅವರು ಪ್ರತಿಪಾದಿಸಿದ ಪ್ರಜಾಪ್ರಭುತ್ವ, ಸಾಮಾಜಿಕ ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಎತ್ತಿಹಿಡಿಯುತ್ತೇವೆ ಎಂಬ ಭರವಸೆಯನ್ನು ನಾವು ನೀಡೋಣ. ನಮಗೆ ಸಮಾನತೆಯ ಹಾದಿಯನ್ನು ತೋರಿಸಿದ ಮತ್ತು ಸಹೋದರತ್ವದ ಗುರಿಯತ್ತ ನಮ್ಮನ್ನು ಮುನ್ನಡೆಸಿದ ಮಹಾನ್ ಶಕ್ತಿಯನ್ನು ನಾವು ಸ್ಮರಿಸೋಣ ಎಂದರು.
ಅದೇ ರೀತಿಯಾಗಿ ಕರ್ನಾಟಕ ದಲಿತ ರಕ್ಷಣಾ ವೇದಿಕೆ ಸಂಘಟನೆಯ ಗಂಗಾವತಿ ತಾಲೂಕ ಅಧ್ಯಕ್ಷರಾದ ಬಾಲಪ್ಪ ಕಂಬಾರ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿಚಾರಗಳು ಸದಾ ಕಾಲ ನಮಗೆಲ್ಲರಿಗೂ ಸ್ಫೂರ್ತಿಯಾಗಲಿ. ಭಾರತಕ್ಕೆ ಸಂವಿಧಾನ ನೀಡಲು ಶ್ರಮಿಸಿದ ಮತ್ತು ನಮಗೆ ದಾರಿದೀಪವಾದ ಮಹಾನಾಯಕ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸೋಣ. ಅವರು ವಿಶ್ವದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡುತ್ತಿರುವ ಮಹಾನಾಯಕರಾಗಿದ್ದು, ಅವರ ಆದರ್ಶಗಳು ನಮಗೆ ದಾರಿದೀಪ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾದಿಗ ಸಮಾಜದ ಹಿರಿಯ ಮುಖಂಡ ಪಾಮಣ್ಣ, ಯು. ಲಕ್ಷ್ಮಣ, ಮರಿಯಪ್ಪ ಪೂಜಾರಿ, ಯು. ದುರುಗಪ್ಪ, ಯು. ಹನುಮಂತಪ್ಪ, ಹೆಚ್. ರಾಜಣ್ಣ ಕಟ್ಟಿಮನಿ, ಕಂಬಾರ ಭೀಮೇಶ, ಕಂಬಾರ ಸಣ್ಣಬಾಬು, ಮುಖಂಡರಾದ ಜೋಗದ ನಾರಾಯಣಪ್ಪ ನಾಯಕ, ಹನುಮಂತಪ್ಪ ನಾಯಕ, ಹಂಪೇಶ ಹರಿಗೋಲು, ದೊಡ್ಡ ಭೋಜಪ್ಪ, ಹುಲೇಶ್ ದೇವರಮನಿ, ಬಸವರಾಜ ಮ್ಯಾಗಳಮನಿ. ಜಿಲಾನಿ ಪಾಷಾ, ಈರಮ್ಮ, ಸರಸ್ವತಿ, ಭಾಗ್ಯಮ್ಮ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಪೋಲಿಸ್ ಇಲಾಖೆ ಅಧಿಕಾರಿಗಳು ಹಾಗೂ ಎಲ್ಲಾ ಸಮಾಜದ ಮುಖಂಡರು ಸೇರಿದಂತೆ ಇತರರು ಭಾಗವಹಿಸಿದ್ದರು.
Comments are closed.