ಜಿಲ್ಲಾ ಕ್ರೀಡಾಂಗಣದಲ್ಲಿ ಡಾ.ಬಸವರಾಜ ಕ್ಯಾವಟರ್ ಮತಯಾಚನೆ

Get real time updates directly on you device, subscribe now.

ಕೊಪ್ಪಳ: ಜಿಲ್ಲಾ ಕ್ರೀಡಾಂಗಣದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಅವರು ಸಾರ್ವಜನಿಕರನ್ನು, ಯುವಮಿತ್ರರನ್ನು ಭೇಟಿ ಆಗಿ ಮುಂಬರುವ ಚುನಾವಣೆಗೆ ಬೆಂಬಲ ಕೋರಿ, ಮತ್ತೊಮ್ಮೆ ಮೋದಿಜೀಗಾಗಿ ಮತಯಾಚನೆ ಮಾಡಿದರು.
ಭಾನುವಾರ ಬೆಳಗ್ಗೆ ಕ್ರೀಡಾಂಗಣಕ್ಕೆ ತೆರಳಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕ್ರೀಡಾ ಕ್ಷೇತ್ರಕ್ಕೆ ಉತ್ತೇಜನೆ ನೀಡಿದ್ದಾರೆ. ಆದ್ದರಿಂದ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತ ಅತ್ಯುತ್ತಮ ಸಾಧನೆ ಮಾಡಿದೆ ಎಂದರು.
ಕಿರಿಯರಿಂದ ಹಿರಿಯ ನಾಗರಿಕರ ತನಕ ಮೋದಿ ಅವರ ಕಾರ್ಯಗಳು ಮಾತನಾಡುತ್ತಿವೆ. ಮತ್ತೊಮ್ಮೆ ಮೋದಿಜೀ ಅವರು ಈ ದೇಶದ ಪ್ರಧಾನಿಯಾಗುವುದರಲ್ಲಿ ಸಂಶಯವಿಲ್ಲ ಎಂದು ತಿಳಿಸಿದರು.
ಇದೇ ವೇಳೆ ಯುವ ಸಮುದಾಯ ಮೋದಿ ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಿರಿಯ ನಾಗರಿಕರು ಕೂಡಾ ಈ ದೇಶದ ಅಭಿವೃದ್ಧಿಗಾಗಿ ಮೋದಿ ಅವರು ಪ್ರಧಾನಿಯಾಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

Get real time updates directly on you device, subscribe now.

Comments are closed.

error: Content is protected !!