ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಅಭ್ಯರ್ಥಿಗೆ ಶ್ರೀರಕ್ಷೆ – ಪ್ರಸನ್ನ ಗಡಾದ
– ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ
ಕೊಪ್ಪಳ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಅಭ್ಯರ್ಥಿಗೆ ಶ್ರೀರಕ್ಷೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪ್ರಸನ್ನ ಗಡಾದ ಹೇಳಿದರು.
ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆ ಜಾರಿಗೆ ಬಿಜೆಪಿ ನಾಯಕರು ಲೇವಡಿ ಮಾಡಿದರು. ರಾಜ್ಯ ಸರ್ಕಾರ ದಿವಾಳಿಯಾಗಲಿದೆ ಎಂದು ಟೀಕಿಸಿದರು. ಆದರೂ ಸಹ ಎಲ್ಲಾ ಯೋಜನೆ ಜಾರಿಗೊಳಿಸಲು ಸರ್ಕಾರ ಶ್ರಮಿಸಿದೆ. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್ ಅವರನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ತಾ.ಪಂ. ಮಾಜಿ ಅಧ್ಯಕ್ಷ ಅಮರೇಶ ಉಪಲಾಪೂರ ಮಾತನಾಡಿ, ಹಿಂದೆ ಬಸವರಾಜ ಹಿಟ್ನಾಳ ಗೆಲುವಿಗಾಗಿ ಕಿನ್ನಾಳ ಗ್ರಾಮದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಪರಿಶ್ರಮ ದೊಡ್ಡದು. ಅದೇ ರೀತಿ ಈಗ ಲೋಕಸಭಾ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಯ ಲಾಭವನ್ನು ಜನತೆಯ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಮಾಡಬೇಕು. ಆಗ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸುಲಭವಾಗಲಿದೆ ಎಂದು ಹೇಳಿದರು. ಕಾಂಗ್ರೆಸ್ ಮುಖಂಡ ಬಸವರಾಜ ಚಿಲವಾಡಗಿ ಮಾತನಾಡಿ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಆದ್ದರಿಂದ ಈ ಬಾರಿ ಗೆಲುವು ಖಚಿತ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮಾಬುಸಾಬ್ ಹೀರಾಳ, ಬಸವರಾಜ ಚಿಲವಾಡಗಿ, ಕೆ. ಮಲ್ಲಿಕಾರ್ಜುನ, ಹನುಮಂತಪ್ಪ ಜೋಗಿ, ಅನಿಲ್ ಬೋರಟ್ಟಿ, ವೀರೇಶ ತಾವರಗೇರಿ, ರವಿ ಅಂಗಡಿ, ಭಾಷಾ ಹಿರೇಮನಿ ಸೇರಿ ಹಲವರು ಇದ್ದರು.
Comments are closed.