ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪನಮನ ಸಲ್ಲಿಕೆ
ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ, ಕೊಪ್ಪಳ ತಹಶೀಲ್ದಾರರಾದ ವಿಠಲ್ ಚೌಗಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಪುತ್ಥಳಿಗೆ ಮಾಲಾರ್ಪಣೆ: ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಹೊಸಪೇಟೆ ರಸ್ತೆಯಲ್ಲಿರುವ ಕಿಶೋರಿ ಪೆಟ್ರೋಲ್ ಬಂಕ್ ಹಿಂಭಾಗದ ನಗರಸಭೆಯ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಉದ್ಯಾನವನದಲ್ಲಿರುವ ಡಾ. ಬಿ. ಆರ್. ಅಂಬೇಡ್ಕರ್ ಮಹನೀಯರ ಪುತ್ಥಳಿಗೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಪುಷ್ಪಾರ್ಚನೆ ಹಾಗೂ ಮಾಲಾರ್ಪಣೆ ಮಾಡಿ ಮಹನೀಯರಿಗೆ ಗೌರವ ನಮನ ಸಲ್ಲಿಸಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ, ಕೊಪ್ಪಳ ತಹಶೀಲ್ದಾರರಾದ ವಿಠಲ್ ಚೌಗಲ್, ತಾಲ್ಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
Comments are closed.