ಬಿಜೆಪಿ ಗೆದ್ದರೆ ಸಿರುಗುಪ್ಪಕ್ಕೆ ರೈಲು ಸಂಚಾರ- ಡಾ.ಬಸವರಾಜ 

Get real time updates directly on you device, subscribe now.

Kannadanet NEWS
ಸಿರುಗುಪ್ಪ: ಕೊಪ್ಪಳ ಲೋಕಸಭಾ ಕ್ಷೇತ್ರವು ಬಿಜೆಪಿ ಅವಧಿಯಿಂದ ಅಭಿವೃದ್ಧಿ ಕಾರ್ಯ ಆರಂಭವಾಗಿದೆ. ಬಿಜೆಪಿಗೆ ಮತ ನೀಡಿ ಗೆಲ್ಲಿಸಿ ಸಿರುಗುಪ್ಪ ವಿಧಾನಸಭಾ ಕ್ಷೇತ್ರಕ್ಕೆ ರೈಲ್ವೆ ಸಂಚಾರ ಆರಂಭಿಸಲಾಗುವುದು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಭರವಸೆ ನೀಡಿದರು.
ತೆಕ್ಕಲಕೋಟೆ ಮಹಾಶಕ್ತಿ ಕೇಂದ್ರದಲ್ಲಿ ಸೋಮವಾರ ನಾರಿಶಕ್ತಿ ವಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಹತ್ತು ವರ್ಷಗಳ ಅವಧಿಯಲ್ಲಿ ರೈಲು ಸಂಚಾರ ಆರಂಭವಾಗಿವೆ. ಆದರೆ, ಸಿರುಗುಪ್ಪ ತಾಲೂಕಿಗೆ ರೈಲು ಸಂಚಾರ ಇಲ್ಲ. ಈ ಬಾರಿ ಬಿಜೆಪಿಗೆ ಮತ ನೀಡಿ ಗೆಲ್ಲಿಸಿದರೆ, ಆದ್ಯತೆ ಮೇರೆಗೆ ಸಿರುಗುಪ್ಪಕ್ಕೆ ರೈಲು ಸಂಚಾರ ಆರಂಭಿಸಲಾಗುವುದು ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಾಲಕಿಯರ ವಿದ್ಯಾಭ್ಯಾಸ ಉತ್ತೇಜನೆಗೆ ವಿದ್ಯಾರ್ಥಿ ವೇತನ, ಮಹಿಳೆಯರ ಸ್ವಾವಲಂಬಿ ಜೀವನಕ್ಕಾಗಿ ಸ್ವಯಂ ಉದ್ಯೋಗ ಕ್ಕೆ ಯೋಜನೆ ತರುವ ಮೂಲಕ ಮಹಿಳಾ ಸಬಲೀಕರಣ ಮಾಡಲಾಗುತ್ತಿದೆ. ಇನ್ನು ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ನೀಡಲು ಕಾಯ್ದೆ ತರುವ ಮೂಲಕ ಮಹಿಳಾ ಪರ ನಿಲುವನ್ನು ಸಾಬೀತು ಮಾಡಲಾಗಿದೆ. ಆದ್ದರಿಂದ ಮಹಿಳಾ ಮತದಾರರು ಮೋದಿ ಅವರನ್ನು ಗೆಲ್ಲಿಸಲು ಬಿಜೆಪಿಗೆ ಮತ ನೀಡಬೇಕು ಎಂದು ಮತಯಾಚಿಸಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಮಟನಾಳ, ಮಾಜಿ ಶಾಸಕ ಸೋಮಲಿಂಗಪ್ಪ, ಯುವ ಮುಖಂಡ ದರಪ್ಪ ನಾಯಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಹುಡೇದ್, ದೊಡ್ಡ ಹುಲುಗಪ್ಪ, ಜೆಡಿಎಸ್ ತಾಲೂಕು ಅಧ್ಯಕ್ಷ ಶಿವಯ್ಯ, ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಶಪ್ಪ ರಾರಾವಿ, ಪ್ರತಾಪ್ ಚೌಧರಿ, ನಗರಸಭೆ ಸದಸ್ಯ ಮಧುಸೂದನ್ ಶೆಟ್ಟಿ, ಮಾಜಿ ತಾಲೂಕು ಅಧ್ಯಕ್ಷ ಸಿದ್ದಯ್ಯ ಸ್ವಾಮಿ ಸೇರಿ ಮತ್ತಿತರರಿದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: