ಕ್ಯಾಂಡಲ್‌ಲೈಟ್ ಮೆರವಣಿಗೆಯಲ್ಲಿ ಎಲ್ಲ ಇಲಾಖೆ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸಿ: ಸಿಇಒ ರಾಹುಲ್ ರತ್ನಂ ಪಾಂಡೆಯ
: ಏಪ್ರಿಲ್ 16 ರ ಮಂಗಳವಾರದAದು ಸಂಜೆ ಮತದಾನ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ನಗರದಲ್ಲಿ ಕ್ಯಾಂಡಲ್ ಲೈಟ್ ಮೆರವಣಿಗೆಯನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊAದಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ರಾಹುಲ್ ರತ್ನಂ ಪಾಂಡೆಯ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಸ್ವೀಪ್ ಸಮಿತಿಯಿಂದ ಮಂಗಳವಾರದAದು ಆಯೋಜಿಸಿರುವ ಕ್ಯಾಂಡಲ್ ಲೈಟ್ ಮೆರವಣಿಗೆ ಕಾರ್ಯಕ್ರಮದ ಪೂರ್ವ ಸಿದ್ದತೆಯ ಕುರಿತು ಚರ್ಚಿಸಲು ಸೋಮವಾರದಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತ್ತು ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಮತದಾನವು ಮೇ 07 ರಂದು ಎರಡನೇ ಹಂತದಲ್ಲಿ ನಡೆಯಲಿದ್ದು, ಈ ಸಂಬAಧ ಮತದಾರರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ. ಅದರಂತೆ ಜಿಲ್ಲಾ ಸ್ವೀಪ್ ಸಮಿತಿಯಿಂದ ಜಿಲ್ಲೆಯ ಮತದಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ಮಂಗಳವಾರದAದು ಸಂಜೆ 07 ಗಂಟೆಗೆ ಕೊಪ್ಪಳ ನಗರದ ಗಂಜ್ ವೃತ್ತದಿಂದ ಅಶೋಕ ವೃತ್ತದವರೆಗೆ ಒಂದು ತಂಡ ಹಾಗೂ ಗಡಿಯಾರ ಕಂಬ ವೃತ್ತದಿಂದ ಅಶೋಕ ವೃತ್ತದವರೆಗೆ ಒಂದು ತಂಡ, ಒಟ್ಟು ಎರಡು ತಂಡಗಳಿAದ ಕ್ಯಾಂಡಲ್ ಲೈಟ್ ಮೆರವಣಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊAದಿಗೆ ತಪ್ಪದೇ ಹಾಜರಾಗಬೇಕು. ಮೆರವಣಗೆಯಲ್ಲಿ ಭಾಗವಹಿಸಬೇಕು ಎಂದು ಸಿಇಒ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮೆರವಣಿಗೆ ನಂತರ ಅಶೋಕ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮತದಾನದ ಮಹತ್ವದ ಬಗ್ಗೆ ಜಾಗೃತಿ ಮಾಹಿತಿ ನೀಡುವುದರೊಂದಿಗೆ ಮತದಾನದ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಗುವುದು. ಮೆರವಣಿಗೆಯು ಶಿಸ್ತುಬದ್ಧವಾಗಿ ಹಾಗೂ ಅರ್ಥಪೂರ್ಣವಾಗಿ ನಡೆಯುವಂತೆ ಇಲಾಖಾ ಅಧಿಕಾರಿಗಳು ಜವಾಬ್ದಾರಿ ವಹಿಸಬೇಕು. ಮೆರವಣಿಗೆ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಆರೋಗ್ಯ ಇಲಾಖೆಯಿಂದ ಒಂದು ಅಂಬ್ಯುಲೆನ್ಸ್ ಹಾಗೂ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ನಗರಸಭೆಯಿಂದ ಕುಡಿಯುವ ನೀರು ಒದಗಿಸಬೇಕು. ಮೆರವಣಿಗೆ ಮಾರ್ಗದಲ್ಲಿ ಮತದಾನದ ಜಾಗೃತಿ ಕುರಿತು ಅಲ್ಲಲ್ಲಿ ಜಾಗೃತಿ ಸ್ಟಿಕ್ಕರ್‌ಗಳನ್ನು ಅಳವಡಿಸಬೇಕು. ಎಲ್ಲ ಅಧಿಕಾರಿ, ಸಿಬ್ಬಂದಿಗಳು ನಿಗದಿತ ಸಮಯಕ್ಕೆ ಹಾಜರಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಸಹಾಯಕ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಶಿವಪ್ಪ ಸುಬೇದಾರ, ತಹಶೀಲ್ದಾರ ವಿಠ್ಠಲ್ ಚೌಗಲಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ತಿಪ್ಪಣ್ಣ ಶಿರಸಗಿ, ಡಿಡಿಪಿಐ ಶ್ರೀಶೈಲ ಬಿರಾದಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Comments are closed.