ಕುಮಾರಸ್ವಾಮಿ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

Get real time updates directly on you device, subscribe now.

ಕೊಪ್ಪಳ : ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದ ಹೆಣ್ಣು ಮಕ್ಕಳು ಹಾದಿ ತಪ್ಪಿದ್ದಾರೆ ಎನ್ನುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಯನ್ನು ವಿರೋಧಿಸಿ ಕೊಪ್ಪಳದಲ್ಲಿ ಇಂದು ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು.
ಕೊಪ್ಪಳ ನಗರದ ಅಶೋಕ್ ಸರ್ಕಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿ ಕುಮಾರಸ್ವಾಮಿ ವಿರುದ್ಧ ಘೋಷಣೆಯನ್ನು ಕೂಗಿದರು. ಇಡೀ ರಾಜ್ಯದ ಮಹಿಳೆಯರನ್ನು ಅಪಮಾನ ಗೊಳಿಸಿರುವಂತಹ ಕುಮಾರಸ್ವಾಮಿ ತಕ್ಷಣವೇ ಕ್ಷಮೆಯನ್ನು ಕೇಳಬೇಕು ಎಂದು ಆಗ್ರಹಿಸಿದರು ಜೊತೆಗೆ ಸಂಜಯ ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರತಿಭಟನೆ ನೇತೃತ್ವವನ್ನು ಶೈಲಜಾ ಹಿರೇಮಠ, ಜ್ಯೋತಿ ಗೊಂಡಬಾಳ, ಸಾವಿತ್ರಿ ಮುಜುಮದಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇವರ ಈ ಹೋರಾಟಕ್ಕೆ ಕೊಪ್ಪಳ ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ, ರವಿ ಕುರುಗೋಡು, ಗಾಳೆಪ್ಪ ಪೂಜಾರ, ರಾಜಶೇಖರ್ ಅದೂರ್, ಪ್ರಸನ್ನ ಗಡಾದ, ಶಿವಕುಮಾರ್ ಶೆಟ್ಟರ್ ಸೇರಿದಂತೆ ಇತರರು ಉಪಸ್ಥಿತರಿದು ಬೆಂಬಲಿಸಿದರು

Get real time updates directly on you device, subscribe now.

Comments are closed.

error: Content is protected !!