ಪ್ರಜಾಪ್ರಭುತ್ವ ಹಬ್ಬದಲ್ಲಿ ಖುಷಿಯಿಂದ ಪಾಲ್ಗೊಳ್ಳಿ : ತಹಶೀಲ್ದಾರ್ ವಿಶ್ವನಾಥ ಮುರಡಿ

Get real time updates directly on you device, subscribe now.

ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಹಬ್ಬ ಇದ್ದಂತೆ. ಎಲ್ಲರೂ ಖುಷಿಯಿಂದ ಪಾಲ್ಗೊಳ್ಳಬೇಕು ಎಂದು ಕನಕಗಿರಿ ತಹಶೀಲ್ದಾರ್ ವಿಶ್ವನಾಥ ಮುರುಡಿ ಅವರು ಹೇಳಿದರು.
ಪಟ್ಟಣದ ಸುವರ್ಣಗಿರಿ ಕಲ್ಮಠದಿಂದ ವಾಲ್ಮೀಕಿ ವೃತ್ತದವರೆಗೆ ತಾಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿಗಾಗಿ ಮಂಗಳವಾರ ಆಯೋಜಿಸಿದ್ದ ಸ್ವೀಪ್ ಮತದಾನ ಜಾಗೃತಿಯ ವಾಕಥಾನ್‌ಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮೇ 07 ರಂದು  ನಡೆಯುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಸದೃಢ ದೇಶ ಕಟ್ಟಲು ಶೇ.100 ರಷ್ಟು ಮತದಾನ ಆಗಬೇಕು. ಯಾರೊಬ್ಬರೂ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯಬಾರದು ಎಂದರು.
ತಾ.ಪA ಕಾರ್ಯನಿರ್ವಾಹಕ ಅಧಿಕಾರಿಗಳಾದ ಎಲ್.ವಿರೇಂದ್ರಕುಮಾರ್ ಅವರು ಮಾತನಾಡಿ, ಕಡ್ಡಾಯವಾಗಿ ಪ್ರತಿಯೊಬ್ಬರೂ ಮತದಾನ ಮಾಡಬೇಕು. ಮತದಾನ ಪವಿತ್ರವಾದದ್ದು, ಯಾರೂ ಮತದಾನದಿಂದ ಹೊರಗುಳಿಯದೇ, ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸಿದರು.
ಚುನಾವಣಾ ರಾಯಭಾರಿಗಳಾದ ಡಾ.ಶಿವಕುಮಾರ್ ಮಾಲಿಪಾಟೀಲ್ ಅವರು ಜಾಥಾದಲ್ಲಿ ಪಾಲ್ಗೊಂಡು, ಮೇ.07 ರಂದು ಲೋಕಸಭಾ ಚುನಾವಣೆ ಮತದಾನ ನಡೆಯಲಿದೆ. ಯಾರೂ ಕೂಡ ಆ ದಿನ ಬೇರೆಡೆ  ತೆರಳದೆ ಕಡ್ಡಾಯವಾಗಿ ಮತ ಚಲಾಯಿಸಬೇಕು. ಯಾವುದೇ ಆಸೆ, ಆಮೀಷಕ್ಕೆ ಬಲಿಯಾಗದೆ ಮತದಾನ ಮಾಡಬೇಕು ಎಂದರು.
ಜಾಗೃತಿ ಜಾಥಾದಲ್ಲಿ ವಿವಿಧ ಇಲಾಖೆ ಸಿಬ್ಬಂದಿಗಳು ಸೇರಿ ಒಟ್ಟು 250 ಕ್ಕೂ ಹೆಚ್ಚು ಜನರು ವಾಕಥಾನ್‌ನಲ್ಲಿ ಭಾಗವಹಿಸಿ ಮತದಾನ ಜಾಗೃತಿ ಮೂಡಿಸಿದರು. ಪಟ್ಟಣದ ಎದುರು ಹನುಮಪ್ಪ ದೇಗುಲದಿಂದ ಬಸ್ ನಿಲ್ದಾಣ ಹಾಗೂ ವಾಲ್ಮೀಕಿ ವೃತ್ತದವರೆಗೆ ನಡೆದ ವಾಕಥಾನ್ ಜಾಥಾದಲ್ಲಿ ಮತದಾನ ಜಾಗೃತಿ ಗೀತೆಗಳು, ಘೋಷಣೆಗಳ ಮೂಲಕ ಅರಿವು ಮೂಡಿಸಲಾಯಿತು.
ಈ ವೇಳೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ದತ್ತಾತ್ರೇಯ ಹೆಗಡೆ, ಸಿಡಿಪಿಓ ವಿರುಪಾಕ್ಷಿ, ತಾ.ಪಂ ಸಹಾಯಕ ನಿರ್ದೇಶಕ ಚಂದ್ರಶೇಖರ್ ಬಿ ಕಂದಕೂರ್, ತಾಲೂಕು ಯೋಜನಾಧಿಕಾರಿ ರಾಜಶೇಖರ್ ಸೇರಿದಂತೆ ತಾಪಂ ಅಧಿಕಾರಿಗಳು, ಪಟ್ಟಣ ಪಂಚಾಯತ್ ಸಿಬ್ಬಂದಿಗಳು, ಎಲ್ಲ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಆರೋಗ್ಯ, ಕಂದಾಯ ಇಲಾಖೆ ಸಿಬ್ಬಂದಿಗಳು, ನರೇಗಾ ಸಿಬ್ಬಂದಿಗಳು, ಅಂಗನವಾಡಿ, ಆಶಾ ಕಾರ್ಯಕರ್ತರು, ಎನ್.ಆರ್.ಎಲ್.ಎಂ ಯೋಜನೆ ಸಿಬ್ಬಂದಿಗಳು ಇದ್ದರು.

Get real time updates directly on you device, subscribe now.

Comments are closed.

error: Content is protected !!
%d bloggers like this: