ಕಾಂಗ್ರೆಸ್ ಪಕ್ಷ ಸೇರಿದ ಕರಡಿ ಸಂಗಣ್ಣ ಹಾಗೂ ಅಮರೇಶ್ ಕರಡಿ
ಬೆಂಗಳೂರು: ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಹಾಗೂ ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕರಡಿ ಸಂಗಣ್ಣ ಎಲ್ಲರ ನಿರೀಕ್ಷೆಯಂತೆ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಕರಡಿ ಸಂಗಣ್ಣ ಅಧಿಕೃತವಾಗಿ ಪಕ್ಷ ಸೇರ್ಪಡೆಗೊಂಡಿದ್ದಾರೆ . ಸಂಗಣ್ಣ ಕರಡಿ ಅವರ ಪುತ್ರ ಅಮರೆಷ್ ಕರಡಿ ಸೇರ್ಪಡೆಗೊಂಡಿದ್ದಾರೆ.
ಈ ಸಂದರ್ಭದಲ್ಲಿ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಮಾಜಿ ಸಚಿವರಾದ ಲಕ್ಷ್ಮಣ ಸವದಿ ಇಕ್ಬಾಲ್ ಅನ್ಸಾರಿ ಕನ್ನಡ ಅಧ್ಯಕ್ಷ ಹಾಸನ್ ಸಾಬ್ ದೋಟಿಹಾಳ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಹಾಗೂ ಕೊಪ್ಪಳ ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪುರ ಸೇರಿದಂತೆ ಇತರರು ಉಪಸ್ಥಿತರಿದ್ದರು.
Comments are closed.