ಕೆಪಿಸಿಸಿ ಕಚೇರಿಯಲ್ಲಿ ಸಂಸದ ಕರಡಿ ಸಂಗಣ್ಣ ಸಿಎಂ, ಡಿಸಿಎಂ  ಸಮ್ಮುಖದಲ್ಲಿ  ಕಾಂಗ್ರೆಸ್ ಸೇರ್ಪಡೆ

Get real time updates directly on you device, subscribe now.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಸೇರ್ಪಡೆಗೊಂಡರು.

ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು ಕರಡಿ ಸಂಗಣ್ಣ ಅವರಿಗೆ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಇದೇ ವೇಳೆ ಕರಡಿ ಸಂಗಣ್ಣ ಅವರ ಅಪಾರ ಬೆಂಬಲಿಗರು ಕೂಡ ಕಾಂಗ್ರೆಸ್ ಸೇರಿದರು. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್.ತಂಗಡಗಿ, ಶಾಸಕರಾದ ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರೆಡ್ಡಿ, ಹಂಪನಗೌಡ ಬಾದರ್ಲಿ, ಲಕ್ಷ್ಮಣ್ ಸವದಿ, ಕೊಪ್ಪಳ ಜಿಲ್ಲಾಧ್ಯಕ್ಷ ಅಮರೇಗೌಡ ಬಯ್ಯಾಪುರ,ಮಾಜಿ ಸಚಿವ ಎಚ್.ಎಂ.ರೇವಣ್ಣ‌‌, ಅಮರೇಶ ಕರಡಿ ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!