ಮುನಿರಾಬಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವೀಪ್ ಕಾರ್ಯಕ್ರಮ
): ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾರರಲ್ಲಿ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕಿನ ಮುನಿರಾಬಾದ ಡ್ಯಾಂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರಿಗೆ ಮತದಾನ ಸ್ವೀಪ್ ಕಾರ್ಯಕ್ರಮ ಜರುಗಿತು.
ದೇಶದ ಅಭಿವೃದ್ಧಿ ಮಾಡುವ, ಸೂಕ್ತ ವ್ಯಕ್ತಿ ಎನ್ನುವ ಬಗ್ಗೆ ಆಲೋಚನೆ ಮಾಡಿ ಮತದಾನ ಮಾಡಬೇಕು. ನಾವು ಹಾಕುವ ಒಂದು ಓಟು ಇಡೀ ದೇಶದ ಚಿತ್ರಣ ಬದಲಾಯಿಸುತ್ತದೆ. ಚುನಾವಣೆ ಸಮಯದಲ್ಲಿ ಆಸೆ, ಆಮಿಷಗಳು ಅಪಾಯಕಾರಿ ರೀತಿಯಲ್ಲಿ ಬರುವುದನ್ನು ನಾವು ತಡೆಯಬೇಕು. ಸ್ವೀಪ್ ಕಾರ್ಯಕ್ರಮದಲ್ಲಿ ಸೇರಿರುವ ಮತದಾರರು ನಿಮ್ಮ ಕುಟುಂಬದ 18 ವರ್ಷ ಮೇಲ್ಪಟ್ಟ ಸದಸ್ಯರು ಮತ ಚಲಾಯಿಸುವ ಮೂಲಕ ದೇಶಕ್ಕೆ ಸುಭದ್ರ ಆಡಳಿತ ಒದಗಿಸಲು ಕೈ ಜೋಡಿಸೋಣ ಎಂದರು. ನಂತರ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.
ಸ್ವೀಪ್ ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿಗಳಾದ ಡಾ||ಕೆ.ಎಚ್.ತೋಗರಿ, ಡಾ|| ರಾಜಲಕ್ಷ್ಮೀ, ಡಾ||ಶ್ವೇತಾ, ಡಾ||ರಾಜಶೇಖರ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.
Comments are closed.