ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಮತ್ತು ಪತ್ರಕರ್ತರು ಸುಧೀಂದ್ರ ಕುಲಕರ್ಣಿ ವಿಶೇಷ ಉಪನ್ಯಾಸ, ಸಂವಾದ
ಬೆಂಗಳೂರು:
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಬೆಂಗಳೂರು ವಿವಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ವತಿಯಿಂದ ಏ.19ರಂದು ಬೆಳಿಗ್ಗೆ 10.30ಕ್ಕೆ ಜನತಂತ್ರ ವ್ಯವಸ್ಥೆಯಲ್ಲಿ ಮಾಧ್ಯಮ ಮತ್ತು ಪತ್ರಕರ್ತರು ಎನ್ನುವ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ಮತ್ತು ಸಂವಾದ ಏರ್ಪಡಿಸಲಾಗಿದೆ.
ಸೆಂಟ್ರಲ್ ಕಾಲೇಜು ಆವರಣದಲ್ಲಿರುವ ಬೆಂಗಳೂರು ವಿವಿ ಜ್ಞಾನಜ್ಯೋತಿ ಸಭಾಂಗಣದ ಸೆಮಿನಾರ್ ಹಾಲ್‌ನಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಮತ್ತು ಸಾಮಾಜಿಕ ಚಿಂತಕ ಸುಧೀಂದ್ರ ಕುಲಕರ್ಣಿ ಅವರು ವಿಶೇಷ ಉಪನ್ಯಾಸ ನೀಡುವರು. ಬೆಂಗಳೂರು ನಗರ ವಿವಿ ಪ್ರೊ.ಲಿಂಗರಾಜ ಗಾಂಧಿ ಉದ್ಘಾಟನೆ ಮಾಡಲಿದ್ದು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆ ಯು ಡ ಬ್ಲೂೃ ಜೆ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ಅನಂತ ಚಿನಿವಾರ್ ಆಶಯ ನುಡಿಗಳನ್ನಾಡಲಿದ್ದಾರೆ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರೊ.ಎನ್.ನರಸಿಂಹಮೂರ್ತಿ ಪ್ರಾಸ್ತಾವಿಕವಾಗಿ ಮಾತನಾಡುವರು. ಬಳಿಕ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ಕೆ ಯು ಡ ಬ್ಲೂೃ ಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ತಿಳಿಸಿದ್ದಾರೆ.
Comments are closed.