ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ರಾಹುಲ್ ರತ್ನಂ ಪಾಂಡೆಯ

Get real time updates directly on you device, subscribe now.

ಕುಕನೂರ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಸಮರ್ಪಕವಾಗಿ ಜನರಿಗೆ ನೀರು ಒದಗಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಹೇಳಿದರು.
ಯಲಬುರ್ಗಾ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಯಲಬುರ್ಗಾ ಹಾಗೂ ಕುಕನೂರ ತಾಲೂಕು ಪಂಚಾಯತ್ ವತಿಯಿಂದ ಹಮ್ಮಿಕೊಂಡಿದ್ದ ಕುಡಿಯುವ ನೀರು ನಿರ್ವಹಣೆ, ಜೆಜೆಎಂ ಕಾಮಗಾರಿಗಳು, ನರೇಗಾ ಇತರೆ ವಿಷಯಗಳ ಕುರಿತು ಸಂಬAಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಪಿಡಿಒರವರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಈ ಬಾರಿ ಬಿಸಿಲಿನ ಪ್ರಮಾಣ ಹೆಚ್ಚಿರುವುದರಿಂದ ಎಲ್ಲಿಯೂ ಕೂಡ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಗ್ರಾಮ ಪಂಚಾಯತಿಗಳಲ್ಲಿ ವಾರದಲ್ಲಿ ಎರಡು ಬಾರಿ ಸಭೆ ಮಾಡಿ ತಾಲೂಕು ಪಂಚಾಯತಿಗೆ ವರದಿ ಸಲ್ಲಿಸಬೇಕು. ತುರ್ತು ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು ಎಂದು ಸಲಹೆ ನೀಡಿದರು.
ಈಗಾಗಲೇ ಎರಡು ತಾಲೂಕಿನಲ್ಲಿ ಜಲಜೀವನ್ ಮಿಷನ್ ಕಾಮಗಾರಿಗಳು ಮುಂದುವರೆದಿದ್ದು, ತುರ್ತಾಗಿ ಕಾಮಗಾರಿ ಮುಗಿಸಬೇಕು. ಸಕಾಲ ಅರ್ಜಿ ಮುಂತಾದವುಗಳನ್ನು ಕೂಡಲೇ ಪರಿಹರಿಸಬೇಕು ಎಂದರು.
ಬೇಸಿಗೆಯಲ್ಲಿ ನಿರಂತರವಾಗಿ ನರೇಗಾ ಯೋಜನೆಯಡಿ ಅಕುಶಲ ಕೂಲಿಕಾರ್ಮಿಕರಿಗೆ ಕೆಲಸ ಒದಗಿಸಬೇಕು. ರೈತರಿಗೆ ಸಾಮೂಹಿಕ ಹಾಗೂ ವೈಯಕ್ತಿಕ ಕಾಮಗಾರಿಗಳನ್ನು ಸಂಬAಧಪಟ್ಟ ಇಲಾಖೆಯವರು ಕೊಟ್ಟು ಗ್ರಾಮದಲ್ಲೇ ಕೆಲಸ ಒದಗಿಸಿಕೊಡಬೇಕು. ಯೋಜನೆಯ ಸದುಪಯೋಗವಾಗಲು ಎಲ್ಲ ಪಿಡಿಒರವರು ಮುಂಜಾಗೃತೆ ವಹಿಸಬೇಕು ಎಂದರು.
ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂತೋಷ ಬಿರಾದರ್ ಪಾಟೀಲ್, ಕಾರ್ಯ ನಿರ್ವಾಹಕ ಅಭಿಯಂತರರು ಗಾ.್ರಕು.ನಿ ಮತ್ತು ನೈ.ವಿ ಕೊಪ್ಪಳ ಮಹೇಶ್ ಶಾಸ್ತಿç, ಸಹಾಯಕ ಕಾರ್ಯಪಾಲಕ ಅಭಿಯಂತರರು ಗ್ರಾ.ಕು.ನಿ ಮತ್ತು ನೈ.ವಿ ಉಪ ವಿಭಾಗ ಯಲಬುರ್ಗಾ ರಿಜ್ವಾನ, ತಾ.ಪಂ ಸಹಾಯಕ ನಿರ್ದೇಶಕರಾದ ಹನಮಂತಗೌಡ ಪೋ.ಪಾಟೀಲ್, ಫಕೀರಪ್ಪ ಕಟ್ಟಿಮನಿ, ಶರಣಪ್ಪ ಕೆಳಗಿನಮನಿ, ಅನುಷ್ಠಾನ ಇಲಾಖೆಯ ಅಧಿಕಾರಿಗಳು,  ಅವಳಿ ತಾಲೂಕಿನ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ವಿಷಯ ನಿರ್ವಾಹಕರು, ನರೇಗಾ ಸಿಬ್ಬಂದಿಗಳು ಹಾಜರಿದ್ದರು.

Get real time updates directly on you device, subscribe now.

Comments are closed.

error: Content is protected !!