ಬಿಜೆಪಿಯವರು ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತಾರೆ: ಶಿವರಾಜ ತಂಗಡಗಿ 

0

Get real time updates directly on you device, subscribe now.

ಕುಷ್ಟಗಿ.ಏ.18: ಬಿಜೆಪಿ ಪಕ್ಷದ ದುರಾಡಳಿತದಿಂದ ದೇಶದಲ್ಲಿ ಶಾಂತಿ, ನೆಮ್ಮದಿ ಹಾಳಾಗಿದೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಕುಷ್ಟಗಿ-ಹನುಮಸಾಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ತಾಲೂಕಿನ ತಳವಗೇರಿ ಗ್ರಾಮದ ಶ್ರೀ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ನರೇಂದ್ರ ಮೋದಿಯವರು ಸುಳ್ಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದ್ದಾರೆ. ಜಾತಿ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದಾರೆ ಬಿಜೆಪಿಯವರು. ಧರ್ಮ ಬಡವರಿಗೆ ಅನ್ನವನ್ನು ಹಾಕುವುದಿಲ್ಲ ಎಂದು ಹೇಳಿದರು. ಕಳೆದ 10 ವರ್ಷಗಳ ಕಾಲ ಆಡಳಿತ ನಡೆಸಿದ ಬಿಜೆಪಿ ಸರಕಾರ ಆಂಜನಾದ್ರಿ ದೇವಸ್ಥಾನಕ್ಕೆ ಒಂದು ನೈಯಾಪೈಸ್ ಕೊಟ್ಟಿಲ್ಲ.  ಧರ್ಮವನ್ನು, ದೇವರನ್ನು ರಾಜಕೀಯಕ್ಕೆ ತರಬೇಡಿ ಎಂದು ಮನವಿ ಮಾಡಿದರು. ಬಡವರು ರೈತರ ಬಗ್ಗೆ ಚಿಂತನೆ ನಡೆಸುತ್ತಿದೆ ಕಾಂಗ್ರೆಸ್ ಪಕ್ಷ. ಬಿಜೆಪಿ ಪಕ್ಷದ ನಾಯಕರು ಮತದಾರರ ಮೂಗಿಗೆ ತುಪ್ಪ ಹಚ್ಚುವ ಕೆಲಸ  ಮಾಡುತ್ತಿದ್ದಾರೆ.

2024 ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು. ಕೊಪ್ಪಳ ಲೋಕಸಭೆ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಅವರಿಗೆ ಹೆಚ್ಚಿನ ಮತವನ್ನು ನೀಡುವ ಮೂಲಕ ಅಧಿಕಾರಕ್ಕೆ ತಂದರೆ ತಕ್ಷಣ ಐದು ಗ್ಯಾರಂಟಿ ನಿಮ್ಮ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡುತ್ತೇವೆ ಎಂದು ಹೇಳಿದರು. ಲೋಕಸಭೆ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ ಮಾತನಾಡಿದ ಅವರು ಬಡವರ ಜೇಬಿಗೆ ಕತ್ತರಿ ಹಾಕುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ. ದಿನ ನಿತ್ಯದ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಬಡವರ ಜೀವನ ನಡೆಸಲು ಕಷ್ಟ ಸಾಧ್ಯವಾಗಿದೆ. ಬಿಜೆಪಿಯವರು ಪೊಳ್ಳು ಭರವಸೆ ನೀಡುವ ಮೂಲಕ ಈ ಹಿಂದೆ ಎರಡು ಬಾರಿ ನನ್ನ ತಂದೆ ಮತ್ತು ನನ್ನನ್ನು ಸೋಲಿಸಿದ್ದಾರೆ. ಪಕ್ಷದ ಹಿರಿಯ ಮುಖಂಡರ ಆರ್ಶಿವಾದದಿಂದ 2024 ನೇ ಸಾಲಿನಲ್ಲಿ ಕಾಂಗ್ರೆಸ್ ಪಕ್ಷದಿಂದ ನನಗೆ ಟಿಕೆಟ್ ದೊರಕಿದೆ. ಕಾರಣ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಮತದಾರರು ನನಗೆ ಬಹುಮತ ನೀಡಿ ಲೋಕಸಭೆಗೆ ಕಳುಹಿಸಬೇಕು ಎಂದು ಮತಯಾಚಿಸಿದರು. ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪೂರ  ತನಾಡಿ

ಒಬ್ಬರಿಗೆ ಹುಟ್ಟಿ ಇನ್ನೂಬ್ಬರ ಹೆಸರು ಹೇಳುವ ಜಾಯಾಮಾನ ನಮ್ಮದಲ್ಲ. ಆ ಕೆಲಸವನ್ನು ಗಂಗಾವತಿ ಶಾಸಕ ಜಿ.ಜನಾರ್ದನ ರೆಡ್ಡಿಯವರು ಮಾಡುತ್ತಾರೆ. ನರೇಂದ್ರ ಮೋದಿಯವರು ದೇಶದಲ್ಲಾದರು ಡ್ಯಾಂ ಕಟ್ಟಿದ್ದರೆ ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆ ಎಂದು ಹೇಳಿದರು. ಬಿಜೆಪಿ ಪಕ್ಷಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ ಜಾತಿ, ಜಾತಿಗಳ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಇವರ ಮೋಜಿನ ಮಾತಿಗಿ ಮರುಳಾಗಬೇಡಿ. ನಮ್ಮ ಪಕ್ಷದ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳವರಿಗೆ ನಿಮ್ಮ ಮತವನ್ನು ನೀಡುವ ಮೂಲಕ ಆರ್ಶಿವಾದ ಮಾಡಬೇಕು ಎಂದು ಮತಯಾಚಿಸಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಫಾರೂಕ್ ಡಲಾಯಿತ, ಮಹಿಳಾ ಜಿಲ್ಲಾ ಅಧ್ಯಕ್ಷೆ ಮಾಲತಿ ನಾಯಕ, ಗ್ಯಾರಂಟಿ ಪ್ರಾಧಿಕಾರದ ಸದಸ್ಯೆ ಶಾರದಾ ಕಟ್ಟಿಮನಿ, ಅಮರೇಗೌಡ ವಕೀಲರು, ಶಂಕರಗೌಡ ವಕೀಲರು, ವಸಂತ ಮೇಲಿನಮನಿ, ಮಹಾಂತೇಶ ಅಗಸಿಮುಂದಿನ, ವೀರಭದ್ರಪ್ಪ ನಾಲತವಾಡ, ಉಮೇಶ ಮಂಗಳೂರ, ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷ ಕಲ್ಲಪ್ಪ ತಳವಾರ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಕೊರಡಕೇರಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಮತದಾರರು ಉಪಸ್ಥಿತರಿದ್ದರು.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: